ಮಾಜಿ ಸಿಎಂ ಯಡಿಯೂರಪ್ಪ 
ರಾಜ್ಯ

ವಿಧಾನ ಪರಿಷತ್‌ ಚುನಾವಣೆ: ಬಿಜೆಪಿಗೆ ಬೆಂಬಲ ನೀಡುವಂತೆ ಜೆಡಿಎಸ್'ಗೆ ಯಡಿಯೂರಪ್ಪ ಮನವಿ

ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ನಡೆಯುತ್ತಿರುವ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಇಲ್ಲದ ಕ್ಷೇತ್ರಗಳಲ್ಲಿ ಬಿಜೆಪಿಗೆ ಬೆಂಬಲ ನೀಡುವಂತೆ ಜೆಡಿಎಸ್ ವರಿಷ್ಠರಾದ ಎಚ್.ಡಿ. ದೇವೇಗೌಡ ಮತ್ತು ಎಚ್‌.ಡಿ. ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡುತ್ತೇನೆಂದ ಬಿ.ಎಸ್.ಯಡಿಯೂರಪ್ಪ ಅವರು ಭಾನುವಾರ ಹೇಳಿದ್ದಾರೆ.

ಚಿಕ್ಕೋಡಿ: ‘ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ನಡೆಯುತ್ತಿರುವ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಇಲ್ಲದ ಕ್ಷೇತ್ರಗಳಲ್ಲಿ ಬಿಜೆಪಿಗೆ ಬೆಂಬಲ ನೀಡುವಂತೆ ಜೆಡಿಎಸ್ ವರಿಷ್ಠರಾದ ಎಚ್.ಡಿ. ದೇವೇಗೌಡ ಮತ್ತು ಎಚ್‌.ಡಿ. ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡುತ್ತೇನೆಂದ ಬಿ.ಎಸ್.ಯಡಿಯೂರಪ್ಪ ಅವರು ಭಾನುವಾರ ಹೇಳಿದ್ದಾರೆ.

ಜನಸ್ವರಾಜ್‌ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಇನ್ನೂ ಅಭ್ಯರ್ಥಿಗಳನ್ನೇ ಘೋಷಣೆ ಮಾಡದ ವಿಚಿತ್ರ ಸ್ಥಿತಿಯಲ್ಲಿದೆ. ಬಿಜೆಪಿಯು 25 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಲ್ಲಿ ಮಾತ್ರ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು, ಕನಿಷ್ಠ 15 ಸ್ಥಾನ ಗೆಲ್ಲುವ ವಿಶ್ವಾಸವಿದೆ. ಈಗಾಗಲೇ ಪಕ್ಷದ ನಾಯಕರು ನಾಲ್ಕು ತಂಡಗಳಲ್ಲಿ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿದ್ದೇವೆ. ಮುಂಬರುವ ದಿನಗಳಲ್ಲಿ ಕೇಂದ್ರ ಮತ್ತು ರಾಜ್ಯದ ನಾಯಕರು ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.

ವಿರೋಧ ಪಕ್ಷದವರು ಕೇವಲ ಟೀಕೆ–ಟಿಪ್ಪಣಿಗಳಲ್ಲಿ ತೊಡಗದೆ ರಚನಾತ್ಮಕ ಸಲಹೆಗಳನ್ನು ನೀಡಿದರೆ ಕಾರ್ಯರೂಪಕ್ಕೆ ತರಲು ನಮ್ಮ ಸರ್ಕಾರ ಸಿದ್ಧವಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಚಿಕ್ಕೋಡಿ ಜಿಲ್ಲೆ ರಚನೆ ಕುರಿತು ಮಾತನಾಡಿ, ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ, ನಾನು ಹಿಂದೆ ನೀಡಿದ್ದ ಭರವಸೆ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT