ರಾಜ್ಯ

ಇನ್ನೂ ಎರಡು ದಿನ ಮಳೆ ಅಬ್ಬರ ಎಚ್ಚರ: ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ  ಯೆಲ್ಲೋ ಅಲರ್ಟ್ ಘೋಷಣೆ

Nagaraja AB

ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಇನ್ನೂ ಎರಡು ದಿನ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ನವೆಂಬರ್ 23ರ ನಂತರ  ಉತ್ತರ ಒಳನಾಡಿನಲ್ಲಿ ಮಳೆ ಕಡಿಮೆಯಾಗಲಿದ್ದು,  ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಇಂದು ತುಮಕೂರು, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಧಾವಣಗೆರೆ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಕೆಲವು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು, ಇನ್ನೂ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ನವೆಂಬರ್ 23ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

SCROLL FOR NEXT