ಬೆಳೆ ಹಾನಿ ಪರಿಶೀಲನೆ ನಡೆಸಿದ ಸಿಎಂ ಬೊಮ್ಮಾಯಿ 
ರಾಜ್ಯ

ಕೋಲಾರದಲ್ಲಿ ಭಾರಿ ಮಳೆಯಿಂದ ಬೆಳೆ ಹಾನಿ; ಪರಿಶೀಲನೆ ನಡೆಸಿದ ಸಿಎಂ ಬೊಮ್ಮಾಯಿ

ಭಾರಿ ಮಳೆಯಿಂದಾಗಿ ಕೋಲಾರ ಜಿಲ್ಲೆಯಲ್ಲಿ ಸಂಭವಿಸಿದ ಬೆಳೆ ಹಾನಿ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು.

ಕೋಲಾರ: ಭಾರಿ ಮಳೆ (heavy rain)ಯಿಂದಾಗಿ ಕೋಲಾರ ಜಿಲ್ಲೆಯಲ್ಲಿ ಸಂಭವಿಸಿದ ಬೆಳೆ ಹಾನಿ (crop loss) ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಇಂದು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು.

ಭಾರೀ ಮಳೆಯಿಂದ ಕೋಲಾರ ಜಿಲ್ಲೆಯಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದು ನಿನ್ನೆ ಸಿಎಂ ಬಸವರಾಜ ಬೊಮ್ಮಾಯಿ ಮಳೆ ಹಾನಿಯ ಬಗ್ಗೆ ಚರ್ಚಿಸಲು ಸಭೆ ಕರೆದು ಸಭೆ ಮಾಡಿ ಕೆಲವು ಕ್ರಮಗಳನ್ನು ಕೈಗೊಂಡರು. ಅಂತೆಯೇ ಇಂದೂ ಸಹ ಕೋಲಾರ ಜಿಲ್ಲೆಯಲ್ಲಿ ಮಳೆ ಹಾನಿ ಪ್ರದೇಶಗಳಿಗೆ ತೆರಳಿದ ಸಿಎಂ ಬೊಮ್ಮಾಯಿ ಪರಿಶೀಲನೆ ನಡೆಸಿದರು. ಈ ವೇಳೆ ಕೋಲಾರ ಡಿಸಿ ಸೆಲ್ವಮಣಿ (DC Selvamani) ಮತ್ತು ಇತರೆ ಅಧಿಕಾರಿಗಳ ತಂಡ ಅವರಿಗೆ ಮಾಹಿತಿ ನೀಡಿದರು.

ಕೋಲಾರ ಜಿಲ್ಲೆಯ  ನರಸಾಪುರದ ರೈತ ಅಪ್ಪಣ್ಣರ ರಾಗಿ ಹೊಲಕ್ಕೆ, ಚೌಡದೇನಹಳ್ಳಿ ಗ್ರಾಮದ ಜಗದೀಶ್ ಅವರ ತೋಟಕ್ಕೆ, ಕಲ್ವಮಂಜಲಿಯ ಯಶೋದಮ್ಮ ಹೊಲಕ್ಕೆ ಸಿಎಂ ಭೇಟಿ ನೀಡಿದ್ದಾರೆ. ಹೂ ಹಾಗೂ ಕೊತ್ತಂಬರಿ ಸೊಪ್ಪಿನ ತೋಟಗಳಿಗೆ ಭೇಟಿ ನೀಡಿ ಜಿಲ್ಲಾಧಿಕಾರಿ ಡಾ. ಆರ್ ಸೆಲ್ವಮಣಿ ಬಳಿ ಮಾಹಿತಿ ಪಡೆದಿದ್ದಾರೆ.

ಕೋಲಾರ ಜಿಲ್ಲೆಯಲ್ಲಿ 48 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ರಾಗಿ, ನೆಲಗಡಲೆ, ತೊಗರಿ, ಮುಸಕಿನ ಜೋಳ ಬೆಳೆ ಹಾನಿಯಾಗಿದೆ. ಸುಮಾರು 7000 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆಗಳು ಹಾನಿಯಾಗಿವೆ. ಕೋಲಾರ ತಾಲೂಕಿನ ಹಲವು ಗ್ರಾಮಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ರಾಗಿ, ಹೂವು, ಟೊಮ್ಯಾಟೊ, ಕ್ಯಾರೆಟ್, ಶುಂಠಿ, ಬೀಟ್‌ರೂಟ್ ತೋಟಗಳಿಗೆ ಸಿಎಂ ಭೇಟಿ ನೀಡಿ ನಷ್ಟದ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಕೋಲಾರ ಜಿಲ್ಲೆಯಲ್ಲಿ ಕೃಷಿ ಮತ್ತು ತೋಟಗಾರಿಕೆ ಬೆಳೆಗಳು ಸೇರಿ ಒಟ್ಟು 70 ಕೋಟಿ ರೂ ನಷ್ಟ ಉಂಟಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. 

ಇನ್ನು ಸಿಎಂ ಬೊಮ್ಮಾಯಿ ಅವರಿಗೆ ಸಂಸದ ಮುನಿಸ್ವಾಮಿ, ಸಚಿವ ಮುನಿರತ್ನ ಸಾಥ್ ನೀಡಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT