ರಾಜ್ಯ

ಕೋವಿಡ್-19: ರಾಜ್ಯದಲ್ಲಿಂದು 178 ಹೊಸ ಪ್ರಕರಣ ಪತ್ತೆ, 373 ಚೇತರಿಕೆ, 2 ಸಾವು

Nagaraja AB

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 178 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,93,777ಕ್ಕೆ ಏರಿಕೆಯಾಗಿದೆ.

373 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಸದ್ಯ 6867 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸೋಂಕಿನಿಂದ ಇಂದು ಇಬ್ಬರು ಮೃತಪಟ್ಟಿದ್ದು, ಒಟ್ಟಾರೇ ಮೃತರ ಸಂಖ್ಯೆ 38,177 ಏರಿಕೆಯಾಗಿದೆ. ಒಟ್ಟು ಸೋಂಕಿನ ಸಂಖ್ಯೆ ಶೇ. 0.31 ರಷ್ಟಿದ್ದು,ಮರಣ ಪ್ರಮಾಣ ಶೇ. 1. 12 ರಷ್ಟಿದೆ. ಬೆಂಗಳೂರಿನಲ್ಲಿ 112 ಸೋಂಕಿತರು ಪತ್ತೆಯಾಗಿದ್ದು, 300 ಮಂದಿ ಗುಣಮುಖರಾಗಿದ್ದಾರೆ. ಒಬ್ಬರು ಸಾವನ್ನಪ್ಪಿದ್ದಾರೆ.

ಬಾಗಲಕೋಟೆ, ಬೀದರ್, ಚಿಕ್ಕಬಳ್ಳಾಪುರ,  ಗದಗ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.

SCROLL FOR NEXT