ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ತುಂಗಭದ್ರಾ ನದಿ ನೀರಿನಲ್ಲಿ ಮುಳುಗಡೆಯಾಗಿರುವ ಪಾಂಡುರಂಗ ಮಂಟಪ. 
ರಾಜ್ಯ

ಭದ್ರಾವತಿ ಜಲಾಶಯದಿಂದ ನೀರು ಬಿಡುಗಡೆ: ಆತಂಕದಲ್ಲಿ ಮುಂಡರಗಿ ರೈತರು

ಭದ್ರಾವತಿ ಜಲಾಶಯದಿಂದ ನೀರು ಬಿಡುಗಡೆ ಮಾಡಿದ್ದೇ ಆದರೆ, ಜಮೀನುಗಳಿಗೆ ನೀರು ನುಗ್ಗಿ ಬೆಳೆ ಹಾನಿಯಾಗುವ ಸಾಧ್ಯತೆಗಳಿದ್ದು, ಈ ಹಿನ್ನೆಲೆಯಲ್ಲಿ ಮುಂಡರಗಿಯಲ್ಲಿನ ರೈತರು ಆತಂಕಕ್ಕೊಳಗಾಗಿದ್ದಾರೆ.

ಗದಗ: ಭದ್ರಾವತಿ ಜಲಾಶಯದಿಂದ ನೀರು ಬಿಡುಗಡೆ ಮಾಡಿದ್ದೇ ಆದರೆ, ಜಮೀನುಗಳಿಗೆ ನೀರು ನುಗ್ಗಿ ಬೆಳೆ ಹಾನಿಯಾಗುವ ಸಾಧ್ಯತೆಗಳಿದ್ದು, ಈ ಹಿನ್ನೆಲೆಯಲ್ಲಿ ಮುಂಡರಗಿಯಲ್ಲಿನ ರೈತರು ಆತಂಕಕ್ಕೊಳಗಾಗಿದ್ದಾರೆ.

ಜಲಾಶಯದಿಂದ ನೀರು ಬಿಡುಗಡೆ ಮಾಡಿದರೆ ಹಮ್ಮಿಗಿ ಬ್ಯಾರೇಜ್'ನ ಗೇಟ್ ಗಳನ್ನು ತೆರೆಯಲೇಬೇಕಿದ್ದು, ಇದರಿಂದ ಭಾರೀ ಪ್ರಮಾಣದ ನೀರು ಕೃಷಿ ಭೂಮಿಗೆ ನುಗ್ಗುವ ಸಾಧ್ಯತೆಗಳಿವೆ ಹೀಗಾಗಿ ರೈತರು ಆತಂಕಕ್ಕೊಳಗಾಗುವಂತಾಗಿದೆ.

ಭಾನುವಾರ ಬೆಳಗ್ಗೆ 43.366 ಕ್ಯೂಸೆಕ್ ನೀರು ಹೊರ ಹರಿದಿದ್ದರಿಂದ ಹಮ್ಮಿಗಿ ಬ್ಯಾರೇಜ್'ನ ಏಳು ಗೇಟ್ ಗಳನ್ನು ತೆರೆಯಲಾಗಿತ್ತು. ಈಗಾಗಲೇ ಭಾರೀ ಮಳೆಯಿಂದಾಗಿ ಬೆಳೆ ಉಳಿಸಿಕೊಳ್ಳಲು ರೈತರು ಹರಸಾಹಸ ಪಡುತ್ತಿದ್ದು, ಇದೀಗ ಜಲಾಶಯದಿಂದ ನೀರು ಬಿಡುಗಡೆ ಮಾಡಿದರೆ ರೈತರು ಮತ್ತಷ್ಟು ಸಂಕಷ್ಟಕ್ಕೆ ಸಿಲುವಂತಾಗುತ್ತದೆ.

ನದಿಯ ಸುತ್ತಮುತ್ತಲೂ ಬಿದರಳ್ಳಿ, ವಿಠಲಾಪುರ, ಸಿಂಗಟಾಲೂರು, ಗುಮ್ಮಗೋಳ, ಶಿರನಹಳ್ಳಿ, ಈರಣ್ಣನಗುಡ್ಡ, ಗಂಗಾಪುರ, ಕಾಕ್ಕೂರು, ಕೊರ್ಲಹಳ್ಳಿ ಮತ್ತಿತರ ಗ್ರಾಮಗಳಿವೆ.

ಭದ್ರತಾವದಿ ನದಿ ಈಗಾಗಲೇ ತುಂಬಿ ಹರಿಯುತ್ತಿದ್ದು, ಕಳೆದೆರಡು ದಿನಗಳಿಂದ ಮುಂಡರಗಿ ತಾಲೂಕಿನ ನೂರಾರು ಎಕರೆ ಪ್ರದೇಶಗಳಿಗೆ ನುಗ್ಗಿದೆ.

ಅಣೆಕಟ್ಟು ಕೇವಲ 1.8 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದ್ದು, ಸ್ಥಳೀಯಾಡಳಿತದಿಂದಾಗಿ ಇನ್ನೂ ನಾಲ್ಕು ಗ್ರಾಮಗಳ ಸ್ಥಳಾಂತರ ಪ್ರಕ್ರಿಯೆಗಳು ಆರಂಭವಾಗಿಲ್ಲ. ಈ ನಡುವೆ ಮುಂಡರಗಿ ತಹಶೀಲ್ದಾರ್ ಹಾಗೂ ಇತರೆ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರೈತರಿಗೆ ನಿಯಮಾನುಸಾರ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

ಭಾರೀ ಪ್ರಮಾಣ ನೀರು ಬರುವ ಹಿನ್ನೆಲೆಯಲ್ಲಿ ಬಿದರಳ್ಳಿ, ವಿಟ್ಲಾಪುರ, ಗುಮ್ಮಗೋಳ ಗ್ರಾಮಗಳನ್ನು ಸ್ಥಳಾಂತರಿಸಬೇಕು ಎಂದು ಈ ಗ್ರಾಮಗಳ ರೈತರು ಒತ್ತಾಯಿಸುತ್ತಿದ್ದಾರೆ.

ಈ ಗ್ರಾಮಗಳನ್ನು ಸ್ಥಳಾಂತರಿಸಿದ್ದೇ ಆದರೆ, ಬ್ಯಾರೇಜ್‌ನಲ್ಲಿ 3.8 ಟಿಎಂಸಿ ಅಡಿ ನೀರು ಸಂಗ್ರಹಿಸಬಹುದು ಮತ್ತು ಪ್ರವಾಹದಂತಹ ಪರಿಸ್ಥಿತಿಯನ್ನು ತಡೆಯಬಹುದು. ಜನ, ಜಾನುವಾರು, ಬೆಳೆಗಳ ಜೀವ ಉಳಿಸಬಹುದು ಎಂದು ಹೇಳಿದ್ದಾರೆ.

ಮುಂಡರಗಿಯ ನೀರಾವರಿ ಇಲಾಖೆ ಅಧಿಕಾರಿಗಳು ಮಾತನಾಡಿ, ‘ನದಿಯ ಒಳಹರಿವು ಹೆಚ್ಚುತ್ತಿದ್ದು, ಏಳು ಗೇಟ್‌ಗಳನ್ನು ತೆರೆಯಲಾಗಿದೆ. ಹೆಚ್ಚುವರಿ ನೀರು ಇದ್ದರೆ ಹೆಚ್ಚಿನ ಗೇಟ್‌ಗಳನ್ನು ತೆರೆಯಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

SCROLL FOR NEXT