ಪ್ರಧಾನಿ ನರೇಂದ್ರ ಮೋದಿ 
ರಾಜ್ಯ

ಬೆಂಗಳೂರಿನಲ್ಲಿ ಬಡವರಿಗೆ ವಸತಿ ಯೋಜನೆ: ಡಿಸೆಂಬರ್ ನಲ್ಲಿ ಪ್ರಧಾನಿ ಮೋದಿ ಉದ್ಘಾಟನೆ?

ವಸತಿ ಇಲಾಖೆಯ ಯೋಜನೆ ಪ್ರಕಾರ ನಡೆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುಂದಿನ ತಿಂಗಳು ಬೆಂಗಳೂರಿನ ಬಡವರಿಗೆ ವಸತಿ ಯೋಜನೆಯನ್ನು ಉದ್ಘಾಟಿಸಲಿದ್ದಾರೆ. 

ಬೆಂಗಳೂರು: ವಸತಿ ಇಲಾಖೆಯ ಯೋಜನೆ ಪ್ರಕಾರ ನಡೆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುಂದಿನ ತಿಂಗಳು ಬೆಂಗಳೂರಿನ ಬಡವರಿಗೆ ವಸತಿ ಯೋಜನೆಯನ್ನು ಉದ್ಘಾಟಿಸಲಿದ್ದಾರೆ. 

2016ರಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರದಲ್ಲಿದ್ದಾಗ ಚಾಲನೆ ನೀಡಲಾಗಿದ್ದ ಈ ವಸತಿ ಯೋಜನೆ ನಗರದ ಬಡವರಿಗೆ 1 ಲಕ್ಷ ಮನೆ ನಿರ್ಮಿಸಿಕೊಡುವ ಉದ್ದೇಶವನ್ನು ಹೊಂದಲಾಗಿತ್ತು. 2018ರಲ್ಲಿ ಮನೆಗಳ ನಿರ್ಮಾಣಕ್ಕೆ ಸರ್ಕಾರ ಟೆಂಡರ್ ಕರೆದಿತ್ತು, ಆದರೆ ಭೂ ಅಭಾವದಿಂದಾಗಿ ಅಗತ್ಯವಿರುವ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದು ಅಧಿಕಾರಿಗಳಿಗೆ ಕಷ್ಟಕರವಾದ ಕೆಲಸವಾಗಿತ್ತು.

2018ರಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಅಂದಿನ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕರ್ನಾಟಕದ ಬೇರೆ ನಗರಗಳಿಗೆ ಸಹ ಯೋಜನೆಯನ್ನು ವಿಸ್ತರಿಸಿದ್ದರು. ಆದರೆ ಅದು ಪ್ರಗತಿ ಹೊಂದಿರಲಿಲ್ಲ. ನಂತರ ಬಿಜೆಪಿ ಸರ್ಕಾರದಲ್ಲಿ ಬಿ ಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾದಾಗ ಯೋಜನೆಗೆ ಮತ್ತೆ ಚಾಲನೆ ನೀಡಿದರು. ಕಳೆದ ಮೇ ತಿಂಗಳಲ್ಲಿ ವಸತಿ ಸಚಿವ ವಿ ಸೋಮಣ್ಣ ಅವರು ಕಳೆದ ಆಗಸ್ಟ್ 15ಕ್ಕೆ 6 ಸಾವಿರ ಮನೆಗಳನ್ನು ಮೊದಲ ಕಂತಿನಲ್ಲಿ ಬಡವರಿಗೆ ಮನೆಯಿಲ್ಲದವರಿಗೆ ಹಸ್ತಾಂತರಿಸುತ್ತಾರೆ ಎಂದು ಹೇಳಿದ್ದರು. ಆದರೆ ಯಡಿಯೂರಪ್ಪನವರು ಮುಖ್ಯಮಂತ್ರಿ ಪದವಿಯಿಂದ ಕೆಳಗಿಳಿದು ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾದರು. ಯೋಜನೆ ಮತ್ತೆ ಹಿನ್ನೆಡೆ ಕಂಡಿತು.

ಈ ಯೋಜನೆಯಡಿ ಪ್ರತಿ ಮನೆಗೆ ಸಾಮಾನ್ಯ ವರ್ಗದವರಿಗೆ 5 ಲಕ್ಷ ಮತ್ತು ಎಸ್‌ಸಿ ಮತ್ತು ಎಸ್‌ಟಿ ಫಲಾನುಭವಿಗಳಿಗೆ 4.2 ಲಕ್ಷ ರೂಪಾಯಿಗಳಾಗುತ್ತದೆ. ಇತ್ತೀಚೆಗೆ ದೆಹಲಿಯಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಹುಕಾಲದಿಂದ ಬಾಕಿ ಉಳಿದಿರುವ ಉಪನಗರ ರೈಲು ಯೋಜನೆ ಸೇರಿದಂತೆ ಹಲವು ಯೋಜನೆಗಳಿಗೆ ಚಾಲನೆ ನೀಡಲು ಡಿಸೆಂಬರ್‌ನಲ್ಲಿ ಬೆಂಗಳೂರಿಗೆ ಆಹ್ವಾನಿಸಿದ್ದರು. ಮುಂದಿನ ಹದಿನೈದು ದಿನಗಳಲ್ಲಿ ಸುಮಾರು 4,000 ಮನೆಗಳು ಪೂರ್ಣಗೊಳ್ಳಲಿವೆ ಎಂದು ವಸತಿ ಇಲಾಖೆಯ ಮೂಲಗಳು ದಿ ನ್ಯೂ ಸಂಡೆ ಎಕ್ಸ್‌ಪ್ರೆಸ್‌ಗೆ ತಿಳಿಸಿವೆ. “ನಗರದಾದ್ಯಂತ 65,000 ಮನೆಗಳನ್ನು ನಿರ್ಮಿಸಲು ನಮಗೆ ಜಾಗ ಸಿಗಬೇಕಿತ್ತು ಅನುಮತಿ ಇದೆ, ಅದರಲ್ಲಿ 42 ಸಾವಿರ ನಿರ್ಮಾಣದ ವಿವಿಧ ಹಂತಗಳಲ್ಲಿವೆ. 316 ಎಕರೆಯಲ್ಲಿ 46 ಸ್ಥಳಗಳಲ್ಲಿ ಮನೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.

ಬಿಜೆಪಿಗೆ, 2022 ರಲ್ಲಿ ನಡೆಯಲಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಗೆ ಈ ವಸತಿ ಯೋಜನೆ ವರವಾಗಬಹುದು. ಇದು 2023 ರ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಕೂಡ ಬಿಜೆಪಿಗೆ ಸಹಾಯ ಮಾಡಬಹುದು. ಈ ಬಗ್ಗೆ ವಸತಿ ಸಚಿವ ಸೋಮಣ್ಣ ಅವರನ್ನು ಸಂಪರ್ಕಿಸಿದಾಗ ಸಿಎಂ ಬೊಮ್ಮಾಯಿ ಅವರೊಂದಿಗೆ ಚರ್ಚಿಸುತ್ತಿದ್ದು, ಶೀಘ್ರದಲ್ಲೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ ಆರೋಪಿ ಬಂಧನ, NIA ವಿಚಾರಣೆ

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

SCROLL FOR NEXT