ಎಸಿಬಿ ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ದಾಖಲೆಗಳ ಪರಿಶೀಲನೆ ಹಾಗೂ ತೀವ್ರ ಶೋಧ 
ರಾಜ್ಯ

ಭ್ರಷ್ಟರ ಬೆನ್ನು ಹತ್ತಿದ ಎಸಿಬಿ: ಸರ್ಕಾರದ ವಿವಿಧ ಇಲಾಖೆಗಳ 15 ಅಧಿಕಾರಿಗಳ ಮನೆ, ಕಚೇರಿ ಮೇಲೆ ದಾಳಿ, 400ಕ್ಕೂ ಹೆಚ್ಚು ಸಿಬ್ಬಂದಿಯಿಂದ ತಪಾಸಣೆ!

ರಾಜ್ಯದಲ್ಲಿ ಎಸಿಬಿ ದಾಳಿ ಭಾರೀ ಸದ್ದು ಮಾಡುತ್ತಿದೆ. ಸರ್ಕಾರದ ವಿವಿಧ ಇಲಾಖೆಗಳ 15 ಅಧಿಕಾರಿಗಳಿಗೆ ಸಂಬಂಧಿಸಿದ 68 ಕಡೆಗಳಲ್ಲಿ ಎಸಿಬಿ ಬುಧವಾರ ಬೆಳ್ಳಂಬೆಳಗ್ಗೆ ದಾಳಿ ಮಾಡಿದ್ದು 408 ಎಸಿಬಿ ಅಧಿಕಾರಿಗಳು ಅಕ್ರಮ ಸಂಪತ್ತಿನ ಬೆನ್ನ ಹತ್ತಿ ಹೊರಟಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಎಸಿಬಿ ದಾಳಿ ಭಾರೀ ಸದ್ದು ಮಾಡುತ್ತಿದೆ. ಸರ್ಕಾರದ ವಿವಿಧ ಇಲಾಖೆಗಳ 15 ಅಧಿಕಾರಿಗಳಿಗೆ ಸಂಬಂಧಿಸಿದ 68 ಕಡೆಗಳಲ್ಲಿ ಎಸಿಬಿ (ACB raid) ಬುಧವಾರ ಬೆಳ್ಳಂಬೆಳಗ್ಗೆ ದಾಳಿ ಮಾಡಿದ್ದು 408 ಎಸಿಬಿ ಅಧಿಕಾರಿಗಳು ಅಕ್ರಮ ಸಂಪತ್ತಿನ ಬೆನ್ನ ಹತ್ತಿ ಹೊರಟಿದ್ದಾರೆ. ಈ ಸಂದರ್ಭದಲ್ಲಿ ಅಪಾರ ಪ್ರಮಾಣದ ನಗ-ನಾಣ್ಯ, ಸಂಪತ್ತು ಪತ್ತೆಯಾಗಿದ್ದು ಎಸಿಬಿ ಅಧಿಕಾರಿಗಳು ಬೆಚ್ಚುಬೀಳುವಂತಾಗಿದೆ. 

ಎಸಿಬಿ ದಾಳಿ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. ಅಧಿಕಾರಿಗಳ ಮನೆಯಲ್ಲಿ ತೀವ್ರ ಶೋಧ ಕಾರ್ಯ ಮುಂದುವರಿದಿದ್ದು ಸತತ ಮೂರು ಗಂಟೆಗಳಿಂದ ದಾಖಲೆಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ. ದಾಳಿ ವೇಳೆ ಸರ್ಕಾರದ ಸಿ ಮತ್ತು ಡಿ ಗ್ರೂಪ್ ನೌಕರರಿಗೆ ಸಂಬಂಧಪಟ್ಟ ಅಪಾರ ಪ್ರಮಾಣದ  ಅಕ್ರಮ ಆಸ್ತಿಪಾಸ್ತಿಗಳನ್ನು ಶೋಧ ಮಾಡಲಾಗುತ್ತಿದೆ ಎನ್ನುವುದು ವಿಶೇಷ.

ಇಂದು ಬೆಳಗ್ಗೆಯೇ ದಾಳಿ ಆರಂಭವಾಗಿದ್ದು ಗದಗ ಜಿಲ್ಲೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ ಎಸ್ ರುದ್ರೇಶಪ್ಪ ಅವರ ಮನೆಯಲ್ಲಿ ಮನೆಯಲ್ಲಿ 7 ಕೆಜಿಯಷ್ಟು ಚಿನ್ನ, 15 ಲಕ್ಷ ರೂಪಾಯಿ ನಗದು ಸಿಕ್ಕಿದೆ. 

8 ಎಸ್ಪಿಗಳು, 100 ಅಧಿಕಾರಿಗಳು ಮತ್ತು 300 ಸಿಬ್ಬಂದಿಗಳ ತಂಡ 15 ಅಧಿಕಾರಿಗಳ ವಿರುದ್ಧ ಅಕ್ರಮ ಆಸ್ತಿ ಪ್ರಕರಣಗಳಿಗೆ ಸಂಬಂಧಿಸಿದಂತೆ 60 ಸ್ಥಳಗಳಲ್ಲಿ ಎಸಿಬಿ ಶೋಧ ನಡೆಸಿದೆ.

ಎಲ್ಲೆಲ್ಲಿ ದಾಳಿ?: ಬೆಂಗಳೂರಿನಲ್ಲಿ ಸಕಾಲ ಕೆಎಎಸ್ ಅಧಿಕಾರಿ ನಾಗರಾಜ್, ಯಲಹಂಕ ಸರ್ಕಾರಿ ಆಸ್ಪತ್ರೆಯ ಫಿಜಿಯೋಥೆರಪಿಸ್ಟ್ ರಾಜಶೇಖರ, ಬಿಬಿಎಂಪಿ ಸಿಬ್ಬಂದಿ ಮಾಯಣ್ಣ, ಬಿಬಿಎಂಪಿ ಡಿ ಗ್ರೂಪ್ ನೌಕರ ಬಾಗಲಗುಂಟೆಯ ಗಿರಿ ಅವರಿಗೆ ಸೇರಿದ ಮನೆಗಳಲ್ಲಿ ಎಸಿಬಿ ತಂಡ ಪರಿಶೀಲನೆ ನಡೆಸಿದೆ.

ಮಂಗಳೂರು ಸ್ಮಾರ್ಟ್‌ ಸಿಟಿ ಇಇ ಕೆ.ಎಸ್.ಲಿಂಗೇಗೌಡ, ಮಂಡ್ಯ ಹೆಚ್‌ಎಲ್‌ಬಿಸಿ ಇಇ ಕೆ.ಶ್ರೀನಿವಾಸ್, ದೊಡ್ಡಬಳ್ಳಾಪುರದ ಕಂದಾಯ ನಿರೀಕ್ಷಕ ಲಕ್ಷ್ಮೀ ನರಸಿಂಹಯ್ಯ, ಮಾಜಿ ಪ್ರಾಜೆಕ್ಟ್ ಮ್ಯಾನೇಜರ್ ವಾಸುದೇವ್, ಬೆಂಗಳೂರು ನಿರ್ಮಿತಿ ಕೇಂದ್ರದ ಮಾಜಿ ಪ್ರಾಜೆಕ್ಟ್ ಮ್ಯಾನೇಜರ್, ಜನರಲ್ ಮ್ಯಾನೇಜರ್ ಬಿ.ಕೃಷ್ಣಾರೆಡ್ಡಿ, ಬೆಂಗಳೂರು ನಂದಿನಿ ಡೇರಿಯ ಜನರಲ್ ಮ್ಯಾನೇಜರ್, ಗದಗ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ, ಸಹಕಾರಿ ಅಭಿವೃದ್ಧಿ ಅಧಿಕಾರಿ ಎ.ಕೆ. ಮಸ್ತಿ ಅವರಿಗೆ ಸೇರಿದ ಮನೆಗಳಲ್ಲಿ ಎಸಿಬಿ ತಂಡ ಪರಿಶೀಲನೆ ನಡೆಸಿದೆ. 

ಜೇವರ್ಗಿ ಲೋಕೋಪಯೋಗಿ ಇಲಾಖೆಯ ಜೆಇ ಶಾಂತಗೌಡ ಬಿರಾದಾರ್ ಗೆ ಸೇರಿದ, ಕಲಬುರಗಿ ನಗರದ ಗುಬ್ಬಿ ಕಾಲೋನಿಯಲ್ಲಿನ ಮನೆಯಲ್ಲಿ ಲಕ್ಷಾಂತರ ರೂಪಾಯಿ ಪತ್ತೆಯಾಗಿದೆ. ಶಾಂತಗೌಡ ಅವರ ಮನೆಯ ನೀರಿನ ಪೈಪ್ ನಲ್ಲಿ, ಬಾತ್ ರೂಮ್ ನಲ್ಲಿ ಹಣ ಬಚ್ಚಿಟ್ಟಿರುವುದು ಗೊತ್ತಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್