ಸಿಎಂ ಬೊಮ್ಮಾಯಿ 
ರಾಜ್ಯ

ಬೆಂಗಳೂರು: ಹೊರಮಾವು ವಾರ್ಡ್​ನ ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಭೇಟಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹೊರಮಾವು ವಾರ್ಡ್​ನ ಬಿಡಿಎಸ್ ನಗರದ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹೊರಮಾವು ವಾರ್ಡ್​ನ ಬಿಡಿಎಸ್ ನಗರದ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದಲ್ಲಿ ಪ್ರವಾಹ ನೀರಿನ ಸಮಸ್ಯೆ ಆಗಿಂದಾಗ್ಗೆ ಆಗುತ್ತಿದೆ. ಸಚಿವ ಬಸವರಾಜ ಬೈರತಿಯವರು ಮಳೆ ನೀರಿನಿಂದಾಗಿರುವ ಸಮಸ್ಯೆಗಳಿಗೆ ಉತ್ತಮ ರೀತಿಯಲ್ಲಿ ಜನರಿಗೆ ಪರಿಹಾರ ಕೊಟ್ಟಿದ್ದಾರೆ ಎಂದು ತಿಳಿಸಿದರು.

ಯಲಹಂಕ ಮತ್ತು ಹೆಬ್ಬಾಳ ವ್ಯಾಲಿಯಿಂದ ಮಳೆನೀರು ಕೆ.ಆರ್.ಪುರಂ, ಮಹದೇವಪುರದ ಮೂಲಕ ಹೋಗುತ್ತದೆ. ರೈಲ್ವೆ ಬ್ಲಾಕೇಡ್ ನಿಂದ ಸುತ್ತಮುತ್ತಲಿನ ಬಡಾವಣೆಗಳಿಗೆ ನೀರು ನುಗ್ಗುತ್ತಿದೆ. ಹೆಬ್ಬಾಳ ವ್ಯಾಲಿ ನೀರು 125 ಅಡಿ ಅಗಲ ಇರುವ ಚರಂಡಿಯಿಂದ ಬರುತ್ತಿದೆ. ಅದನ್ನು ಸರಿಯಾಗಿ ನಿರ್ವಹಿಸಲಾಗುತ್ತಿದೆ. ಆದರೆ ರೈಲ್ವೆ ವೆಂಟ್ ಬಹಳ ಚಿಕ್ಕದಿರುವುದರಿಂದ ದೊಡ್ಡ ಪ್ರಮಾಣದಲ್ಲಿ ನೀರು ಹರಿದುಬಂದಾಗ 10-12 ಅಡಿ ನೀರು ಹೊರಗೆ ಹರಿಯುತ್ತಿದೆ. ಅದಕ್ಕಾಗಿ ಸಂಬಂಧಪಟ್ಟ ರೈಲ್ವೆ ಅಧಿಕಾರಿಗಳೊಂದಿಗೆ ಇಂದೇ ಮಾತನಾಡಿ , ಇದಕ್ಕೆ ಬೇಕಾದ ಹಣಕಾಸಿನ ವ್ಯವಸ್ಥೆಯನ್ನೂ ಮಾಡಿ ರೈಲ್ವೆ ವೆಂಟ್ ನ್ನು ವಿಸ್ತರಿಸಿ ಸಂಪೂರ್ಣವಾಗಿ ನೀರು ಹೋಗಲು ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಅರ್ಕಾವತಿ ಲೇಔಟ್ ಬಳಿ ಬಿಡಿಎ ವತಿಯಿಂದ ಇನ್ನೊಂದು ರೈಲ್ವೇ ವೆಂಟ್​ನನ್ನು ಮಾಡಲಾಗುತ್ತಿದ್ದು, ಬಿಡಿಎ ದವರು ಮಾಡಲು ಸೂಚಿಸಲಾಗಿದೆ. ಅದಕ್ಕೆ ಮುಂದುವರಿದ ಆರ್ ಸಿಸಿ ಲೈನಿಂಗ್ ನ ಚರಂಡಿ ವ್ಯವಸ್ಥೆಯನ್ನೂ ಕಲ್ಕೆರೆಗೆ ಮುಟ್ಟಿಸುವ ಕೆಲಸವನ್ನು ಮುಂದಿನ ದಿನಗಳಲ್ಲಿ ಮಾಡಲಾಗುವುದು . ನಾಗೇನಹಳ್ಳಿ ಕೆರೆಯಿಂದ ಬರುವ ಮುಖ್ಯ ಡ್ರೈನ್ ನ್ನು ಅಗಲೀಕರಣಗೊಳಿಸಿ 3.5 ಕಿ.ಮೀ ವರೆಗೆ ನಿರ್ಮಿಸಿ ಹೆಬ್ಬಾಳ ವ್ಯಾಲಿಗೆ ಸೇರಿಸುವ ಕಾಮಗಾರಿಯನ್ನು ಸಧ್ಯದಲ್ಲಿಯೇ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT