ರಾಜ್ಯ

ಶಿವಮೊಗ್ಗ ಕೃಷಿ ವಿವಿಯ 6ನೇ ಘಟಿಕೋತ್ಸವಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಚಾಲನೆ

Lingaraj Badiger

ಶಿವಮೊಗ್ಗ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗುರುವಾರ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ೬ನೇ ಘಟಿಕೋತ್ಸವಕ್ಕೆ ಚಾಲನೆ ನೀಡಿದರು.

ಘಟಿಕೋತ್ಸವದಲ್ಲಿ ಹೆಸರಾಂತ ಅಣು ಜೀವಶಾಸ್ತ್ರಜ್ಞ ಭಾರತೀಯ ಸಂಜಾತ ವಿಜ್ಞಾನಿ ಡಾ.ಕೃಷ್ಣಮೂರ್ತಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು. ನಂತರ ವಿವಿಧ ಶಿಕ್ಷಣ ವಿಭಾಗದಲ್ಲಿ ೨೮ ವಿದ್ಯಾರ್ಥಿಗಳಿಗೆ ೩೫ ಚಿನ್ನದ ಪದಕ ಹಾಗೂ ೧೫ ವಿದ್ಯಾರ್ಥಿಗಳಿಗೆ ಪಿಎಚ್ಡಿ ಪದವಿ ಪ್ರದಾನ ಮಾಡಲಾಯಿತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ಉಪ ಮಹಾ ನಿರ್ದೇಶಕರಾದ ಡಾ. ಆರ್.ಸಿ. ಅಗರ್ವಾಲ್ ಘಟಿಕೋತ್ಸವದ ಭಾಷಣ ಮಾಡಿದರು .ಈ ಸಂದರ್ಭದಲ್ಲಿ ಕುಲಪತಿಗಳಾದ ಡಾ. ಎಂ. ಕೆ. ನಾಯ್ಕ್, ಕುಲಸಚಿವರುಗಳಾದ ಡಾ. ಆರ್ ಲೋಕೇಶ್ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.

ಜೋಗದಲ್ಲಿ ವಾಸ್ತವ್ಯ
ಭಾರತದ ಅತಿ ಎತ್ತರದ ಜೋಗ ಜಲಪಾತ ಮತ್ತು ಸುತ್ತಮುತ್ತಲಿನ ನಿಸರ್ಗದ ಸೌಂದರ್ಯವನ್ನು ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಲ್ಹೋಟ್ ಅವರು ವೀಕ್ಷಿಸಿ ಸಂತಸ ಪಟ್ಟರು.

ನವೆಂಬರ್ ೨೪ರಂದು ರಾತ್ರಿ ಜೋಗದಲ್ಲಿ ವಾಸ್ತವ್ಯ ಹೂಡಿದ ಅವರು ಇಂದು ಮುಂಜಾನೆಯೇ ಜೋಗದ ರಾಜಾ ರಾಣಿ ರೋರರ್ ರಾಕೆಟ್ ಹೆಸರಿನ ಜಲಧಾರೆಗಳ ಮಾಹಿತಿಯನ್ನು ಪಡೆದರು. ನಂತರ ದಟ್ಟವಾದ ಕಾಡು ಮತ್ತು ಗುಡ್ಡಗಳ ನಡುವಲ್ಲಿ ಶರಾವತಿ ನದಿಯು ಹರಿದು ಅತಿ ಎತ್ತರದಿಂದ ಭೋರ್ಗರೆಯುತ್ತಾ ನಾಲ್ಕು ಸೀಳಾಗಿ ಧುಮುಕುತ್ತಿರುವ ವೈಭವದ ದೃಶ್ಯವನ್ನು ಕಣ್ತುಂಬಿಕೊಂಡರು.

SCROLL FOR NEXT