ರಮೇಶ್ ಜಾರಕಿಹೊಳಿ 
ರಾಜ್ಯ

ಜಾರಕಿಹೊಳಿ ಸಿಡಿ ಪ್ರಕರಣ: ತನಿಖೆಯ ಆದೇಶ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ 3 ಅಧಿಕಾರಿಗಳು!

ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ದಿನೇಶ್ ಕಲ್ಲಹಳ್ಳಿ ನೀಡಿದ್ದ ದೂರನ್ನಾಧರಿಸಿ ಎಫ್‍ಐಆರ್ ದಾಖಲಿಸದ ಸಂಬಂಧ ತನಿಖೆ ನಡೆಸಲು ನಗರದ 8ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದ ಬೆನ್ನಲ್ಲೇ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿ ಮೂವರು ಅಧಿಕಾರಿಗಳು ಹೈಕೋರ್ಟ್ ಮೆಟ್ಟಿಲೇರಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ದಿನೇಶ್ ಕಲ್ಲಹಳ್ಳಿ ನೀಡಿದ್ದ ದೂರನ್ನಾಧರಿಸಿ ಎಫ್‍ಐಆರ್ ದಾಖಲಿಸದ ಸಂಬಂಧ ತನಿಖೆ ನಡೆಸಲು ನಗರದ 8ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದ ಬೆನ್ನಲ್ಲೇ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿ ಮೂವರು ಅಧಿಕಾರಿಗಳು ಹೈಕೋರ್ಟ್ ಮೆಟ್ಟಿಲೇರಿದ್ದಾರೆಂದು ತಿಳಿದುಬಂದಿದೆ.

ಮ್ಯಾಜಿಸ್ಟ್ರೇಟ್ ಕೋರ್ಟ್ ನೀಡಿರುವ ತನಿಖೆಯ ಆದೇಶವನ್ನು ರದ್ದುಗೊಳಿಸಬೇಕೆಂದು ಮೂವರು ಅಧಿಕಾರಿಗಳು ಅರ್ಜಿ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ.

ಖಾಸಗಿ ದೂರು ಆಧರಿಸಿ ಮ್ಯಾಜಿಸ್ಟ್ರೇಟ್ ಕೋರ್ಟ್ ನೀಡಿರುವ ಆದೇಶ ರದ್ದುಪಡಿಸಬೇಕು ಎಂದು ಕೋರಿ ನಗರ ಪೊಲೀಸ್ ಆಯುಕ್ತ  ಕಮಲ್ ಪಂತ್, ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್.ಅನುಚೇತ್, ಇನ್ಸ್‍ಪೆಕ್ಟರ್ ಮಾರುತಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಅರ್ಜಿ ಗುರುವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತಾವು ಯಾವುದೇ ಕರ್ತವ್ಯಲೋಪ ಎಸಗಿಲ್ಲ. ಅಲ್ಲದೆ, ದೂರುದಾರರು ಸಂತ್ರಸ್ಥೆಗೆ ಸಂಬಂಧಿಸಿದ ವಿವರಗಳನ್ನು ಆರಂಭದಲ್ಲಿ ಒದಗಿಸಿರಲಿಲ್ಲ. ಪ್ರಕರಣದಲ್ಲಿ ಆರೋಪಿತ ಮಾಜಿ ಸಚಿವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ. ಈ ಮಧ್ಯೆ ಖಾಸಗಿ ದೂರು ಆಧರಿಸಿ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ಹೊರಡಿಸಿದೆ. ಈ ನಿಟ್ಟಿನಲ್ಲಿ ತಮ್ಮ ವಿರುದ್ಧ ಮ್ಯಾಜಿಸ್ಟ್ರೇಟ್ ಕೋರ್ಟ್ ಹೊರಡಿಸಿರುವ ಆದೇಶ ರದ್ದು ಮಾಡಬೇಕು ಎಂದು ಅಧಿಕಾರಿಗಳು ಕೋರಿದ್ದಾರೆ.

8ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್, ನವೆಂಬರ್ 23 ರಂದು, ಜನಾಧಿಕಾರ ಸಂಘರ್ಷ ಪರಿಷತ್ತಿನ (ಜೆಎಸ್‌ಪಿ) ಅಧ್ಯಕ್ಷ ಆದರ್ಶ್ ಆರ್ ಅಯ್ಯರ್ ಅವರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್‌ಗೆ ಸಲ್ಲಿಸಿದ ಖಾಸಗಿ ದೂರನ್ನು ಗಂಭೀರವಾಗಿ ಪರಿಗಣಿಸಿ ಪೊಲೀಸ್ ಅಧಿಕಾರಿಗಳ ವಿರುದ್ಧ ಸಿಆರ್‌ಪಿಸಿಯ 156(3)  ಸೆಕ್ಷನ್ ಅಡಿಯಲ್ಲಿ ತನಿಖೆ ನಡೆಸಲು ಆದೇಶಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!