ರಾಜ್ಯ

ಸಂವಿಧಾನವೇ ನಮ್ಮ ರಾಷ್ಟ್ರಧರ್ಮ, ಸದಾಶಯಗಳನ್ನು ಸಂರಕ್ಷಿಸೋಣ: ನಾಡಿನ ಜನತೆಗೆ ಸಿಎಂ ಬೊಮ್ಮಾಯಿ ಶುಭಾಶಯ

Shilpa D

ಬೆಂಗಳೂರು: 1949ರಲ್ಲಿ ಸಂವಿಧಾನ ರಚನಾ ಸಭೆಯು ಭಾರತದ ಸಂವಿಧಾನವನ್ನು ಅಂಗೀಕರಿಸಿದ ನೆನೆಪಿಗಾಗಿ ದೇಶ  ಇಂದು ಸಂವಿಧಾನ ದಿನವನ್ನು ಆಚರಿಸುತ್ತಿದೆ.

2015ರಿಂದ ಸಂವಿಧಾನ ದಿನ ಆಚರಣೆ ಆರಂಭವಾಯ್ತು. ಈ ಐತಿಹಾಸಿಕ ದಿನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಮಸ್ತ ಭಾರತೀಯರಿಗೆ ಸಂವಿಧಾನ ದಿನದ ಶುಭಾಶಯ ತಿಳಿಸಿದ್ದಾರೆ.

1949ರ ನ.26ರಂದು ಭಾರತದ ಸಂವಿಧಾನ ಅಂಗೀಕಾರವಾಯ್ತು. ನಮ್ಮ ಸಂವಿಧಾನದ ಸದಾಶಯಗಳನ್ನು ಸಂರಕ್ಷಿಸುವ ಹಾಗೂ ಪಾಲಿಸುವ ದೃಢ ನಿಶ್ಚಯದೊಂದಿಗೆ ಕರ್ತೃಗಳನ್ನು ಸ್ಮರಿಸೋಣ. ನಮ್ಮ ಎಲ್ಲ ಸಂವಿಧಾನ ಕರ್ತೃಗಳನ್ನು ಸ್ಮರಿಸೋಣ. ಸಂವಿಧಾನಕ್ಕೆ ಸದಾ ಬದ್ಧರಾಗಿರುವ ಸಂಕಲ್ಪ ಪುನರುಚ್ಛರಿಸೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಸಂವಿಧಾನವೇ ನಮ್ಮ ರಾಷ್ಟ್ರಧರ್ಮ. ಪ್ರತಿಯೊಬ್ಬ ಭಾರತೀಯನ ಸ್ವಾತಂತ್ರ್ಯ, ಹಕ್ಕು, ಘನತೆಯನ್ನು ಸಂವಿಧಾನ ರಕ್ಷಿಸುತ್ತದೆ. ಸಮಾನತೆಯೊಂದಿಗೆ ನಮ್ಮ ವಿಚಾರ, ಅಭಿವ್ಯಕ್ತಿ, ಶ್ರದ್ಧೆ, ಉಪಾಸನೆಯ ಸ್ವಾತಂತ್ರ್ಯವೂ ಸಂವಿಧಾನದತ್ತವಾಗಿದ್ದು. ಸಂವಿಧಾನದ ಸದಾಶಯ ಸಂರಕ್ಷಿಸುವ ಕೆಲಸ ಮಾಡೋಣ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

SCROLL FOR NEXT