ರಾಜ್ಯ

Covid-19: ರಾಜ್ಯದಲ್ಲಿ ಇಂದು 402 ಹೊಸ ಕೊರೋನಾ ಸೋಂಕು ಪ್ರಕರಣ, 6 ಸಾವು

Srinivasamurthy VN

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕೋವಿಡ್ ಅಬ್ಬರದ ಏರಿಳಿತ ಮುಂದುವರೆದಿದ್ದು, ಇಂದು ರಾಜ್ಯದಲ್ಲಿ ಹೊಸ ಸೋಂಕಿತರ ಸಂಖ್ಯೆ 400ರ ಗಡಿದಾಟಿದೆ.

ಹೌದು.. ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿಗಳ ಪ್ರಕಾರ ಇಂದು ರಾಜ್ಯಾದ್ಯಂತ 402 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ರಾಜ್ಯದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 2994963ಕ್ಕೆ ಏರಿಕೆಯಾಗಿದೆ. ಅಂತೆಯೇ ಇಂದು ಕೋವಿಡ್ ನಿಂದ 6 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ರಾಜ್ಯದಲ್ಲಿ ಕೋವಿಡ್ ಗೆ ಬಲಿಯಾದವರ ಸಂಖ್ಯೆ 38193ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ 277 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ರಾಜ್ಯದಲ್ಲಿನ ಒಟ್ಟಾರೆ ಗುಣಮುಖರ ಸಂಖ್ಯೆ 2950130ಕ್ಕೆ ಏರಿಕೆಯಾಗಿದೆ. ಪ್ರಸ್ತುತ ರಾಜ್ಯದಲ್ಲಿ 6611 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಅಂತೆಯೇ ಇಂದು ರಾಜ್ಯಾದ್ಯಂತ 3,23,293 ಡೋಸ್ ಲಸಿಕೆ ನೀಡಲಾಗಿದ್ದು, ಆ ಮೂಲಕ ಈ ವರೆಗೆ ರಾಜ್ಯದಲ್ಲಿ ವಿತರಣೆ ಮಾಡಲಾದ ಕೋವಿಡ್ ಲಸಿಕೆಗಳ ಪ್ರಮಾಣ 7, 24,34,9,983 ಡೋಸ್ ಗೆ ಏರಿಕೆಯಾಗಿದೆ.

ಬೆಂಗಳೂರಿನಲ್ಲೇ 224 ಹೊಸ ಸೋಂಕು ಪ್ರಕರಣ
ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಇಂದು 224 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇತ್ತೀಚಿನ ದಿನಗಳಲ್ಲಿ ಇದು ಗರಿಷ್ಠ ಪ್ರಮಾಣದ್ದು ಎನ್ನಲಾಗಿದೆ. ಉಳಿದಂತೆ 2ನೇ ಸ್ಥಾನದಲ್ಲಿ ಧಾರವಾಡ ಜಿಲ್ಲೆ ಇದ್ದು, ಇಲ್ಲಿ ಇಂದು 85 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಉಳಿದಂತೆ ಮೈಸೂರಿನಲ್ಲಿ 25, ದಕ್ಷಿಣ ಕನ್ನಡದಲ್ಲಿ 19, ಬೆಳಗಾವಿಯಲ್ಲಿ 9 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ.
 

SCROLL FOR NEXT