ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಐವರು ಬಾಂಗ್ಲಾ ಅಕ್ರಮ ವಲಸಿಗರು ಸಿಸಿಬಿ ವಶಕ್ಕೆ

ಬೆಂಗಳೂರಿನಲ್ಲಿ ಐವರು ಅಕ್ರಮ ವಲಸಿಗರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಐವರು ಅಕ್ರಮ ವಲಸಿಗರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಸ್ವತಃ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, 'ಇಂದು ಸಿಸಿಬಿ ಪೊಲೀಸರು ಐದು ಜನ ಬಾಂಗ್ಲಾ ಅಕ್ರಮ ವಲಸಿಗರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಕ್ರಮ ವಲಸಿಗರ ಬಗ್ಗೆ ಸರ್ಕಾರ ಎಚ್ಚರಿಕೆ ವಹಿಸಿದೆ. ಅಕ್ರಮ ವಲಸಿಗರ ಪಟ್ಟಿ ಮಾಡಲು ಪೊಲೀಸ್ ಠಾಣೆಗಳಿಗೆ ನಿರ್ದೇಶನ ನೀಡಲಾಗಿದೆ. ಅವರ ಪಟ್ಟಿ ಮಾಡಿ ಅವರನ್ನು ಡಿಟೆಂಷನ್ ಸೆಂಟರ್ ತಂದು ಹಾಕಲು ಸೂಚನೆ ನೀಡಲಾಗಿದೆ. ಅಕ್ರಮ ವಲಸಿಗರು ದೇಶದ ಭದ್ರತೆಗೆ ಅಪಾಯಕಾರಿಯಾಗಿದ್ದಾರೆ ಎಂದು ತಿಳಿಸಿದರು.

ಅಕ್ರಮ ವಲಸೆ ಕುರಿತು ತನಿಖೆ, ಅಕ್ರಮ ದಾಖಲೆ ಕೊಡಿಸುವ ಜಾಲವೇ ಇದೆ
ಅಂತೆಯೇ ಅವರು ಹೇಗೆ ಬಂದಿದ್ದಾರೆ, ಯಾರು ಕರೆದುಕೊಂಡು ಬಂದಿದ್ದಾರೆ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಅಕ್ರಮ ವಲಸಿಗರು ಕಟ್ಟಡ ಕೆಲಸ,‌ ಕಾಫಿ ಎಸ್ಟೇಟ್ ಕೆಲಸಕ್ಕೆ ಬಂದಿದ್ದಾರೆ. ಅವರನ್ನು ಯಾರು ಕರೆದುಕೊಂಡು ಬರುತ್ತಾರೆ ಎಂಬುದನ್ನು ತಿಳಿಯಲು ಈ ಮೂಲಕ್ಕೆ ಕೈಹಾಕಿ ತನಿಖೆ ಮಾಡಲಾಗುವುದು. ಅವರನ್ನು ವಶಕ್ಕೆ ಪಡೆದು ಬಾಯಿ ಬಿಡಿಸುವ ಕೆಲಸ ಆಗಲಿದೆ. ಅಕ್ರಮ ವಲಸಿಗರಿಗೆ ದಾಖಲೆ ಕೊಡಿಸುವ ಜಾಲವೇ ಇದೆ. ಅವರಿಗೆ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಸಿಗುತ್ತದೆ ಆದರೆ ನಮ್ಮ ಬಡವರಿಗೆ ಸಿಗುತ್ತಿಲ್ಲ. ಕರ್ನಾಟಕದಲ್ಲಿ ಅಲ್ಲ, ಅಸ್ಸಾಂ ಭಾಗದಲ್ಲಿ ಇಂತಹ ಜಾಲ ಇದೆ. ಕೇಂದ್ರಕ್ಕೆ ಹಾಗೂ ಆಯಾ ರಾಜ್ಯಕ್ಕೆ ಈ ಬಗ್ಗೆ ಮಾಹಿತಿ ನೀಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: ಬೆಂಗಳೂರು: ಸಿಸಿಬಿ ಪೊಲೀಸರಿಂದ 38 ಅಕ್ರಮ ವಲಸಿಗರು ವಶಕ್ಕೆ, ಮಾದಕ ವಸ್ತುಗಳು ಜಪ್ತಿ
 
ಉದ್ದೇಶಪೂರ್ವಕವಾಗಿ ಪೊಲೀಸ್ ಕೇಸ್ ಹಾಕಿಸಿಕೊಳ್ಳುತ್ತಾರೆ
ಅಕ್ರಮ ವಲಸಿಗರು ಬೇಕೆಂದೇ ಸಣ್ಣ ಪುಟ್ಟ ಕೇಸ್‌ಗಳನ್ನು ಹಾಕಿಸಿಕೊಳ್ಳುತ್ತಾರೆ. ಪ್ರಕರಣ ಮುಗಿಯುವವರೆಗೂ ಅವರು ನಗರ ಬಿಟ್ಟು ಹೊರಗೆ ಹೋಗುವಂತೆ ಆಗುವುದಿಲ್ಲ. ಹೀಗೆ ಅವರು ಇಲ್ಲಿಯೇ ನೆಲೆಸುವ ಪ್ರಯತ್ನ ಮಾಡುತ್ತಿದ್ದಾರೆ. ಅಂತಹವರನ್ನು ಹೊರಗೆ ಕಳುಹಿಸುವ ಪ್ರಯತ್ನ ನಡೆಯುತ್ತಿದೆ. ವೀಸಾ ಅವಧಿ ಮುಗಿದರೂ ಇಲ್ಲಿಯೇ ಇರುವವರನ್ನು ಬಂಧಿಸಬೇಕು, ಇಲ್ಲವೇ ಹೊರ ಹಾಕಬೇಕು. ಬಾಂಗ್ಲಾದೇಶದ ಅಕ್ರಮ ವಲಸಿಗರು ಸರ್ಕಾರಕ್ಕೆ ದೊಡ್ಡ ತಲೆ ನೋವಾಗಿದ್ದಾರೆ. ಈ ವಲಸಿಗರು ಕಸ ವಿಲೇವಾರಿ ಘಟಕಗಳಲ್ಲಿ ಸೇರಿಕೊಂಡು ಕೆಲಸ ಮಾಡುತ್ತಿದ್ದಾರೆ. ಅವರಿಗೆ ತ್ಯಾಜ್ಯ ಗುತ್ತಿಗೆದಾರರೇ ಬೆಂಬಲವಾಗಿದ್ದಾರೆ. ಕಸ ಸಂಸ್ಕರಣೆಗಾಗಿ ಪ್ರತಿ ವರ್ಷವೂ ಅವರನ್ನು ಕರೆಸಿಕೊಳ್ಳುತ್ತಿದ್ದಾರೆ. ಭೂ ಮಾಲೀಕರ ಜತೆಗೆ ಮಾತನಾಡಿ ಅವರು ಶೆಡ್ ನಿರ್ಮಿಸಿಕೊಳ್ಳಲು ನೆರವು ನೀಡುತ್ತಿದ್ದಾರೆ. ಕಸ ವಿಲೇವಾರಿ ಮಾಡುವವರು ವಸತಿ ಸಂಕೀರ್ಣಗಳ ಸಮೀಪ ಅವುಗಳನ್ನು ಸುರಿಯುವ, ಬೆಂಇ ಹಚ್ಚಿ ಸುಡುವ ಕೆಲಸ ಮಾಡುತ್ತಿದ್ದಾರೆ. ಅಲ್ಲದೆ ಕೆರೆ ರಾಜಕಾಲುವೆಗಳಿಗೂ ತ್ಯಾಜ್ಯಗಳನ್ನು ಎಸೆಯುತ್ತಿದ್ದಾರೆ ಎಂಬ ಆರೋಪವಿದೆ ಎಂದು ಹೇಳಿದರು.

ಅಕ್ರಮ ವಲಸೆ ಕಾನೂನಿನಡಿಯಲ್ಲಿ ಪ್ರಕರಣ: ಸಂದೀಪ್ ಪಾಟಿಲ್
ಇನ್ನು ಇದೇ ವಿಚಾರವಾಗಿ ಮಾತನಾಡಿದ ಜಂಟಿ ಪೊಲೀಸ್ ಆಯುಕ್ತ (ಅಪರಾಧ ವಿಭಾಗ) ಸಂದೀಪ್ ಪಾಟೀಲ್ ಅವರು, 'ಕಾಡುಗೋಡಿಯಲ್ಲಿ ಐವರು ಅಕ್ರಮ ಬಾಂಗ್ಲಾದೇಶ ಪ್ರಜೆಗಳನ್ನು ಬಂಧಿಸಲಾಗಿದೆ. ವಿದೇಶಿಗರ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT