ರಾಜ್ಯ

ಕೋವಿಡ್ ಲಸಿಕಾ ಅಭಿಯಾನ ತೀವ್ರಗೊಳಿಸಿ: ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ

Manjula VN

ಬೆಂಗಳೂರು: ಲಸಿಕಾ ಅಭಿಯಾನವನ್ನು ತೀವ್ರಗೊಳಿಸಿ 2ನೇ ಡೋಸ್ ರಾಜದ್ಯ ಸರಾಸರಿಯನ್ನು ಹೆಚ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಅವರು ಇಂದು ಕೋವಿಡ್ ಲಸಿಕಾ ಕಾರ್ಯಕ್ರಮದ ಪ್ರಗತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳೊಂದಿಗೆ ನಡೆದ ವೀಡಿಯೋ ಸಂವಾದದಲ್ಲಿ ಮಾತನಾಡಿದರು.

ಮೊದಲನೇ ಡೋಸ್‍ನಲ್ಲಿ ರಾಜ್ಯದ ಸರಾಸರಿ ಶೇ. 90 ರಷ್ಟಿದ್ದು, ಎರಡನೇ ಡೋಸ್ ಲಸಿಕೆ ಹಾಕುವುದರಲ್ಲಿ ರಾಜ್ಯದ ಸರಾಸರಿ ಶೇ. 57 ರಷ್ಟಿದೆ. ಡಿಸೆಂಬರ್ ಅಂತ್ಯದೊಳಗೆ 2 ನೇ ಡೋಸ್ ಶೇ. 70 ಕ್ಕೆ ಮುಟ್ಟಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಲಸಿಕೆ ಪ್ರಮಾಣ ಯಾವ ಗ್ರಾಮದಲ್ಲಿ ಕಡಿಮೆ ಇದೆಯೋ, ಯಾವ ಪ್ರದೇಶದಲ್ಲಿ ಲಸಿಕೆ ಹಾಕಿಸಕೊಳ್ಳಲು ಜನ ಹಿಂಜರಿಯುತ್ತಾರೋ ಅಂತಹವರ ಮನವೊಲಿಸಿ ಲಸಿಕೆ ನೀಡುವ ಕೆಲಸವಾಗಬೇಕು. ಇವರನ್ನು ಪ್ರಭಾವಿಸುವ ವ್ಯಕ್ತಿ, ಸಂಸ್ಥೆಗಳನ್ನು ಬಳಸಿಕೊಂಡು ನಿಗದಿತ ಗುರಿ ಸಾಧಿಸಬೇಕು.

ಕೋವಿಡ್ ಅಲೆ ಕಡಿಮೆಯಾಗಿದೆ ಎಂಬ ಭಾವನೆ ಬೇಡ. ಈಗಾಗಲೇ ಮೂರನೇ ಅಲೆ ಆರಂಭದ ಲಕ್ಷಣಗಳು ದೇಶ ಮತ್ತು ರಾಜ್ಯದಲ್ಲಿ ಗೋಚರವಾಗುತ್ತಿದೆ. ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಪ್ರತಿನಿತ್ಯ ಕನಿಷ್ಠ ಒಂದು ತಾಸು ಕೋವಿಡ್ ಲಸಿಕಾ ಪ್ರಗತಿಯ ಕುರಿತಂತೆ ಪರಿಶೀಲನೆ ನಡೆಸಬೇಕು ಎಂದು ಸೂಚನೆ ನೀಡಿದರು.

SCROLL FOR NEXT