ಸಂಗ್ರಹ ಚಿತ್ರ 
ರಾಜ್ಯ

ಶಾಲೆ ಬಿಟ್ಟ ಮಕ್ಕಳ ಪತ್ತೆ ಹಚ್ಚಿ, ಮರಳಿ ದಾಖಲು ಮಾಡಲು ಪಂಚಾಯತ್ ಅಧಿಕಾರಿಗಳು ಮುಂದು

ಕೋವಿಡ್ ಲಾಕ್ಡೌನ್ ಬಳಿಕ ಹೆಚ್ಚಿನ ಸಂಖ್ಯೆಯ ಮಕ್ಕಳು ಶಾಲೆಯಿಂದ ಹೊರಗುಳಿದಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಶಾಲೆ ಬಿಟ್ಟ ಮಕ್ಕಳನ್ನು ಪತ್ತೆಹಚ್ಚಿ ಮರಳಿ ಶಾಲೆಗೆ ಕರೆತರುವಂತೆ ಪ್ರತಿ ಪಂಚಾಯತ್‌ನ ಸದಸ್ಯರು ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಿದೆ ನೀಡಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ಕೋವಿಡ್ ಲಾಕ್ಡೌನ್ ಬಳಿಕ ಹೆಚ್ಚಿನ ಸಂಖ್ಯೆಯ ಮಕ್ಕಳು ಶಾಲೆಯಿಂದ ಹೊರಗುಳಿದಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಶಾಲೆ ಬಿಟ್ಟ ಮಕ್ಕಳನ್ನು ಪತ್ತೆಹಚ್ಚಿ ಮರಳಿ ಶಾಲೆಗೆ ಕರೆತರುವಂತೆ ಪ್ರತಿ ಪಂಚಾಯತ್‌ನ ಸದಸ್ಯರು ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಿದೆ ನೀಡಿದೆ ಎಂದು ತಿಳಿದುಬಂದಿದೆ.

ಗ್ರಾಮ ಪಂಚಾಯಿತಿ ಅಭಿವೃದ್ಧಿಯ ಅಂಗವಾಗಿ ಇಡೀ ಪಂಚಾಯಿತಿಗೆ ಸಾಕ್ಷರತೆ ವಹಿಸಲು ಮತ್ತು ವಯಸ್ಕ ಸಾಕ್ಷರತಾ ಕಾರ್ಯಕ್ರಮಗಳನ್ನು ಪ್ರೋತ್ಸಾಹಿಸಲು ಸದಸ್ಯರಿಗೆ ಸೂಚನೆ ನೀಡಿದೆ ಎಂದು ವರದಿಗಳು ತಿಳಿಸಿವೆ.

ಸರ್ಕಾರದ ಸೂಚನೆ ಬೆನ್ನಲ್ಲೇ ಇದೀಗ ಪಂಚಾಯತ್ ಅಧಿಕಾರಿಗಳು, ಮಕ್ಕಳನ್ನು ಶಾಲೆಗೆ ಆಕರ್ಷಿಸಲು ಮಧ್ಯಾಹ್ನದ ಊಟದೊಂದಿಗೆ ಹೆಚ್ಚುವರಿಯಾಗಿ ಸ್ನ್ಯಾಕ್ಸ್ ಗಳನ್ನೂ ಸೇರ್ಪಡೆಗೊಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನಡೆಸಿದ ಸಮೀಕ್ಷೆಯಲ್ಲಿ, ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ 1.59 ಲಕ್ಷ ಮಕ್ಕಳು ಕೋವಿಡ್ ಲಾಕ್ಡೌನ್ ಬಳಿಕ ಶಾಲೆಗೆ ಹೋಗುತ್ತಿಲ್ಲ ಶಾಲೆಬಿಟ್ಟ ಬಹುತೇಕ ಮಕ್ಕಳು ಕೂಲಿ ಕೆಲಸಕ್ಕೆ ಹೋಗುತ್ತಿದ್ದಾರೆಂದು ತಿಳಿದುಬಂದಿದೆ.

ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಶಾಲೆಗಳಿಗೆ ವಿದ್ಯಾರ್ಥಿಗಳನ್ನು ಸೇರಿಸಲು ಮತ್ತು ಶಾಲೆ ಬಿಡುವ ಪ್ರಮಾಣವನ್ನು ಕಡಿಮೆ ಮಾಡಲು ಮತ್ತು ವಿದ್ಯಾರ್ಥಿಗಳು ಶಾಲೆಗೆ ಮರಳಲು ಸಹಾಯ ಮಾಡುವ ಸೌಲಭ್ಯಗಳನ್ನು ಒದಗಿಸುವಂತೆ ಪಂಚಾಯತ್ ಸದಸ್ಯರು ಮತ್ತು ಅಧಿಕಾರಿಗಳಿಗೆ ತಿಳಿಸಿದೆ ಎನ್ನಲಾಗುತ್ತಿದೆ.

ಈ ನಡುವೆ ಪಂಚಾಯತ್ ರಾಜ್ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್ ಅವರು ಸುತ್ತೋಲೆಯೊಂದನ್ನು ಹೊರಡಿಸಿದ್ದು, 14 ಮತ್ತು 15ನೇ ಹಣಕಾಸು ಆಯೋಗದ ಅನುದಾನವನ್ನು ಬಳಸಿಕೊಳ್ಳಲು ಮತ್ತು ಶಾಲೆಗಳ ಸ್ಥಿತಿಯನ್ನು ಸುಧಾರಿಸಲು ಪಂಚಾಯತ್‌ಗಳಿಗೆ ನಿರ್ದೇಶನ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT