ಧಾರವಾಡದ ಎಸ್ ಡಿಎಂ ಮೆಡಿಕಲ್ ಕಾಲೇಜಿನಲ್ಲಿ ಕೊರೋನಾ ಸ್ಫೋಟ: ಸೋಂಕಿತರ ಸಂಖ್ಯೆ 281ಕ್ಕೆ ಏರಿಕೆ
ಧಾರವಾಡ ನಗರದ ಎಸ್ ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಶನಿವಾರ 281ಕ್ಕೇರಿದೆ.
ಧಾರವಾಡ: ಧಾರವಾಡ ನಗರದ ಎಸ್ ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಶನಿವಾರ 281ಕ್ಕೇರಿದೆ. ನಿನ್ನೆ ಹೊಸದಾಗಿ 77 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. 281 ಸೋಂಕಿತರ ಪೈಕಿ 6 ಮಂದಿ ಮಾತ್ರ ಕೋವಿಡ್-19 ಸೋಂಕಿನ ಗುಣಲಕ್ಷಣಗಳನ್ನು ಹೊಂದಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ತಿಳಿಸಿದ್ದಾರೆ.
ಇನ್ನು ಕಾಲೇಜಿನ 1,822 ಮಂದಿಯ ಸ್ಯಾಂಪಲ್ ಗಳ ವರದಿ ಬರಬೇಕಾಗಿದ್ದು, ಇಂದು ಸಾಯಂಕಾಲ ವರದಿ ಸಿಗಲಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.
ಎಸ್ ಡಿಎಂ ಮೆಡಿಕಲ್ ಕಾಲೇಜಿನಿಂದ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆ ಹೊಂದುತ್ತಿರುವ ರೋಗಿಗಳು ಆರ್ ಟಿಪಿಸಿಆರ್ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸುವಂತೆ ಮತ್ತು 7 ದಿನ ಕ್ವಾರಂಟೈನ್ ನಲ್ಲಿರುವಂತೆ ಸೂಚಿಸಲಾಗಿದೆ. ಆಸ್ಪತ್ರೆ ಆವರಣಕ್ಕೆ ಹೋಗಲು ಆಯ್ದ ಪೊಲೀಸರಿಗೆ ಮಾತ್ರ ಅವಕಾಶ ಕಲ್ಪಸಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.