ರಾಜ್ಯ

ಕೇರಳದಿಂದ ಬೆಂಗಳೂರಿಗೆ ಆಗಮಿಸುವ ಎಲ್ಲಾ ಪ್ರಯಾಣಿಕರಿಗೂ ಕೋವಿಡ್ ಪರೀಕ್ಷೆ ಕಡ್ಡಾಯ

Lingaraj Badiger

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಕ್ಲಸ್ಟರ್‌ಗಳ ಸಂಖ್ಯೆ ಹೆಚ್ಚಳದ ಭೀತಿಯ ನಡುವೆಯೇ ಹೊಸ ರೂಪಾಂತರಿ ಓಮಿಕ್ರಾನ್ ವೈರಸ್ ಆಂತಕ ಎದುರಾಗಿದ್ದು, ರಾಜ್ಯ ಸರ್ಕಾರ ಕೇರಳದಿಂದ ಬೆಂಗಳೂರಿಗೆ ಬರುವ ಎಲ್ಲಾ ಪ್ರಯಾಣಿಕರಿಗೆ ಕೋವಿಡ್ -19 ಪರೀಕ್ಷೆ ಕಡ್ಡಾಯಗೊಳಿಸಲು ನಿರ್ಧರಿಸಿದೆ.

ಈ ಸಂಬಂಧ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಅವರು ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ್ದು, ನಗರದ ಕೆಲವು ಭಾಗಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿದ್ದು, ಅದನ್ನು ತಕ್ಷಣವೇ ನಿಯಂತ್ರಿಸಬೇಕಾಗಿದೆ ಎಂದು ಹೇಳಿದ್ದಾರೆ.

ಪ್ರಯಾಣಿಕರನ್ನು ಪರೀಕ್ಷಿಸಲು ಮತ್ತು ಕೋವಿಡ್ ಪರೀಕ್ಷೆಗಳನ್ನು ನಡೆಸಲು ಪ್ರಮುಖ ಬಸ್ ನಿಲ್ದಾಣಗಳು, ಟರ್ಮಿನಲ್‌ಗಳು ಮತ್ತು ರೈಲು ನಿಲ್ದಾಣಗಳಲ್ಲಿ ವಿಶೇಷ ತಂಡಗಳನ್ನು ನಿಯೋಜಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ನಗರದಲ್ಲಿ, ನವೆಂಬರ್ 26 ರಂದು ಬೆಂಗಳೂರು ಒಂದರಲ್ಲೇ 224 ಕೋವಿಡ್ ಪ್ರಕರಣಗಳು ದಾಖಲಾಗಿವೆ, ಇದು ಒಳ್ಳೆಯ ಲಕ್ಷಣವಲ್ಲ ಎಂದು ಅವರು ಹೇಳಿದ್ದಾರೆ.

ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬಿಬಿಎಂಪಿ ಆಯುಕ್ತರಪು, ನಗರದ ಹೊರವಲಯ ಮತ್ತು ಗಡಿಯಲ್ಲಿ ಕೋವಿಡ್ ಪರೀಕ್ಷೆಗಳನ್ನು ನಡೆಸುವ ಕುರಿತು ಬೆಂಗಳೂರು ನಗರ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದೇನೆ ಎಂದು ಹೇಳಿದರು. ಹೊಸ ರೂಪಾಂತಿಯನ್ನು ತಡೆಯಲು ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಿದ್ದಾರೆ.

SCROLL FOR NEXT