ರಾಜ್ಯ

ಓಮಿಕ್ರಾನ್ ಆತಂಕ: ಅಧಿಕಾರಿಗಳ ಜತೆ ಸಭೆ ನಡೆಸಿದ ಸಿಎಂ, ಹೊಸ ಮಾರ್ಗಸೂಚಿ ಬಿಡುಗಡೆ

Lingaraj Badiger

ಬೆಂಗಳೂರು: ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ವೈರಸ್ ಆಂತಕ ಎದುರಾಗಿದ್ದು, ರೂಪಾಂತರಿ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಅಧಿಕಾರಿಗಳ ಜತೆ ಸಭೆ ನಡೆಸಿದರು.

ಸಿಎಂ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಹಲವು ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಿಗಿ ವಿಚಕ್ಷಣೆ ಕೈಗೊಳ್ಳುವುದು, ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯ ಪ್ರವೇಶಿಸುವವರಿಗೆ ಆರ್.ಟಿ.ಪಿ.ಸಿ. ಆರ್. ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಲಾಗಿದೆ.

ಗಡಿ ಜಿಲ್ಲೆಗಳ ಚೆಕ್ ಪೋಸ್ಟ್ ಗಳಲ್ಲಿ ಸಂಬಂಧಿಸಿದ ಇಲಾಖೆಗಳ ಸಿಬ್ಬಂದಿ ಮೂರು ಶಿಫ್ಟ್ ಗಳಲ್ಲಿ ಕೆಲಸ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದಕ್ಕೆ ಎಲ್ಲ ಇಲಾಖೆಗಳ ಸಹಕಾರ ಪಡೆಯುವಂತೆ ಸೂಚಿಸಲಾಗಿದೆ ಎಂದು ಸಭೆಯ ನಂತರ ಕಂದಾಯ ಸಚಿವ ಆರ್ ಅಶೋಕ್ ಅವರು ತಿಳಿಸಿದ್ದಾರೆ.

16 ದಿನಗಳ ಹಿಂದೆ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡಿಸಬೇಕು, ಹಾಸ್ಟೆಲ್ ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ನೆಗಟಿವ್ ರಿಪೋರ್ಟ್ ಬಂದ ನಂತರದ 7ನೇ ದಿನಕ್ಕೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡಿಸಬೇಕು, ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರನ್ನು ಕಡ್ಡಾಯವಾಗಿ ಪರೀಕ್ಷೆಗೊಳಪಡಿಸಬೇಕು ಎಂದು ತಿಳಿಸಿದರು.

ಹೋಟೇಲು, ರೆಸ್ಟೋರೆಂಟ್‌ಗಳು, ಸಿನಿಮಾ ಹಾಲ್‌ಗಳು, ಈಜುಗೊಳ, ಸಾರ್ವಜನಿಕ ಗ್ರಂಥಾಲಯ, ಮೃಗಾಲಯಗಳು ಮತ್ತು ಜೈವಿಕ ಉದ್ಯಾನವನಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆದಿರಬೇಕು.

ವೈದ್ಯಕೀಯ ಕಾಲೇಜು ಮತ್ತು ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸಬೇಕು

ಸರ್ಕಾರಿ ಕಚೇರಿಗಳಲ್ಲಿ ಹಾಗೂ ಮಾಲ್‌ಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆಯಬೇಕು. ಸರ್ಕಾರಿ ಕಚೇರಿ ಹಾಗೂ ಮಾಲ್‌ಗಳಲ್ಲಿಯೇ ಲಸಿಕೆ ನೀಡಲು ವ್ಯವಸ್ಥೆ ಕಲ್ಪಿಸಬೇಕು.

ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆಗಳನ್ನು ತೀವ್ರಗೊಳಿಸುವುದು. ನೆಗಟಿವ್ ಇದ್ದವರಿಗೆ ನಗರ ಪ್ರವೇಶಕ್ಕೆ ಅನುಮತಿ ನೀಡಬೇಕು, ಕಾಲೇಜುಗಳಲ್ಲಿ ಸಾಂಸ್ಕ್ರತಿಕ ಕಾರ್ಯಕ್ರಮ ಮುಂದೂಡುವಂತೆ ಸೂಚಿಸಲಾಗಿದೆ.

SCROLL FOR NEXT