ರಾಜ್ಯದಲ್ಲಿಂದು ಕೊರೋನಾಗೆ ಮೂವರು ಸಾವು: 322 ಹೊಸ ಪ್ರಕರಣ ಪತ್ತೆ, 176 ಸೋಂಕಿತರು ಗುಣಮುಖ
ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 322 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,95,285ಕ್ಕೆ ಏರಿಕೆಯಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 322 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,95,285ಕ್ಕೆ ಏರಿಕೆಯಾಗಿದೆ.
176 ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 6,754 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ: ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ 94 ಮಂದಿ ಆಗಮನ, ಇಬ್ಬರಲ್ಲಿ ಕೋವಿಡ್-19 ಸೋಂಕು ದೃಢ; ರಾಜ್ಯದಲ್ಲಿ ಓಮಿಕ್ರಾನ್ ಭೀತಿ!
ಸೋಂಕಿನಿಂದ ಇಂದು ಮೂವರು ಮೃತಪಟ್ಟಿದ್ದಾರೆ. ಇದರೊಂದಿಗೆ ಸೋಂಕಿನಿಂದ ಈವರೆಗೂ ಮೃತಪಟ್ಟವರ ಸಂಖ್ಯೆ 38,196 ಆಗಿದೆ. ಸೋಂಕಿನ ಪ್ರಮಾಣ ಶೇ 0.34 ರಷ್ಟಿದ್ದು, ಮರಣ ಪ್ರಮಾಣ ಶೇ. 0.93 ರಷ್ಜಿದೆ.
ಬೆಂಗಳೂರಿನಲ್ಲಿ 149 ಹೊಸ ಪ್ರಕರಣ ಪತ್ತೆಯಾಗಿದ್ದು, 105 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಯಾವುದೇ ಸಾವು ಪ್ರಕರಣ ಸಂಭವಿಸಿಲ್ಲ. ಬಾಗಲಕೋಟೆ, ಬಳ್ಳಾರಿ, ದಾವಣಗೆರೆ, ಹಾವೇರಿ, ಕಲಬುರಗಿ, ರಾಯಚೂರು, ರಾಮನಗರ, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.
Related Article
ಬೋಟ್ಸ್ವಾನಾ ಭೀತಿ: ವಿದೇಶಿ ಪ್ರಯಾಣಿಕರಿಗೆ ರಾಜ್ಯದಲ್ಲಿ ಕಠಿಣ ತಪಾಸಣೆ
ರಾಜ್ಯದಲ್ಲಿ 4 ಕೋವಿಡ್ ಕ್ಲಸ್ಟರ್ ಪತ್ತೆ: ಆತಂಕ ಹೆಚ್ಚಳ
ರಾಜ್ಯದಲ್ಲಿ ಕೊರೋನಾ ಸ್ಫೋಟ: ಸಂಜೆ 4 ಗಂಟೆಗೆ ಸಿಎಂ ಬೊಮ್ಮಾಯಿ ಸಭೆ, ವಿಡಿಯೊ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳು ಭಾಗಿ
'ಒಮೈಕ್ರಾನ್' ರೂಪಾಂತರಿ ಕೊರೋನಾ ವೇಗವಾಗಿ ಹಬ್ಬುವ ಸಾಧ್ಯತೆಯಿದೆ, ಎಚ್ಚರವಾಗಿರಿ: ಆರೋಗ್ಯ ಸಚಿವ ಡಾ ಕೆ ಸುಧಾಕರ್