ರಾಜ್ಯ

ಇಸ್ರೊ ಗಗನಯಾನ ಯೋಜನೆ ಸ್ಥಳಾಂತರಕ್ಕೆ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರೋಧ: ಮೋದಿ, ಬೊಮ್ಮಾಯಿಗೆ ಪತ್ರ

Harshavardhan M

ಬೆಂಗಳೂರು: ಗಗನಯಾನ ಯೋಜನೆ ಸ್ಥಳಾಂತರ ಕುರಿತಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರಿಗೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪತ್ರ ಬರೆದಿದ್ದಾರೆ. 

ಇಸ್ರೋ ಸಂಸ್ಥೆಯ ಮಹತ್ವಾಕಾಂಕ್ಷಿ ಭಾರತೀಯ ಮಾನವಸಹಿತ ಗಗನಯಾನ ಯೋಜನೆಯನ್ನು ಬೆಂಗಳೂರಿನಿಂದ ಗುಜರಾತಿಗೆ ಸ್ಥಳಾಂತರ ಮಾಡುವ ಪ್ರಸ್ತಾಪವನ್ನು ಕೂಡಲೇ ಕೈಬಿಡಬೇಕಾಗಿದೆ. ನಿಮ್ಮ ಬಿಡುವಿಲ್ಲದ ಸಮಯದಲ್ಲೂ ನಮ್ಮ ಮನವಿಯತ್ತ ಗಮನಹರಿಸಿ ಎಂದು ಕೋರುತ್ತೇನೆ ಎಂದು ಡಿಕೆಶಿ ಮನವಿ ಮಾಡಿದ್ದಾರೆ.

ಅಲ್ಲದೆ, ಪತ್ರದಲ್ಲಿ, ಕರ್ನಾಟಕ ನಾಡಿನ ಜನರ ಹೆಮ್ಮೆ, ಆತ್ಮಗೌರವಕ್ಕೆ ಸಂಬಂಧಪಟ್ಟ ಯೋಜನೆ ವಿಚಾರವಾಗಿ ನಾನು ಇಂದು ನಿಮ್ಮ ಗಮನ ಸೆಳೆಯುತ್ತಿದ್ದೇನೆ. ಇದು ನನ್ನ ಕರ್ತವ್ಯವೂ ಆಗಿದೆ.

ಹಲವು ದಶಕಗಳಿಂದ ಬೆಂಗಳೂರಿನಲ್ಲಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಕೇಂದ್ರ ಕಛೇರಿ ಹಾಗೂ ಇದು ಬಾಹ್ಯಾಕಾಶ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗೆ ಪ್ರತಿಯೊಬ್ಬ ಕನ್ನಡಿಗರು ಹೆಮ್ಮೆ ಪಡುತ್ತಾರೆ.

ನಿಮಗೆ ತಿಳಿದಿರುವಂತೆ 2007ರಿಂದ ಇಸ್ರೋ 'ಮಾನವಸಹಿತ ಬಾಹ್ಯಾಕಾಶ ಗಗನಯಾನ' ಯೋಜನೆಗೆ ಬೇಕಾದ ತಂತ್ರಜ್ಞಾನವನ್ನು ಸಿದ್ಧಪಡಿಸಿಕೊಂಡು ಬಂದಿದೆ ಎಂದೂ ಬರೆದಿದ್ದಾರೆ. 

SCROLL FOR NEXT