ಕೋವಿಡ್-19 ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಕೊರೋನಾ ಏರಿಳಿತ: 315 ಹೊಸ ಪ್ರಕರಣ ಪತ್ತೆ, 236 ಚೇತರಿಕೆ, 2 ಸಾವು

ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಕಡಿಮೆಯಾಗಿದ್ದ ಕೊರೋನಾ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 315 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,95,600ಕ್ಕೆ ಏರಿಕೆಯಾಗಿದೆ. 

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಕಡಿಮೆಯಾಗಿದ್ದ ಕೊರೋನಾ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 315 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,95,600ಕ್ಕೆ ಏರಿಕೆಯಾಗಿದೆ. 

236 ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 6,831 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸೋಂಕಿನಿಂದ ಇಂದು ಇಬ್ಬರು ಸಾವನ್ನಪ್ಪಿದ್ದು, ಒಟ್ಟಾರೇ ಮೃತರ ಸಂಖ್ಯೆ 38,198ಕ್ಕೆ ಏರಿಕೆಯಾಗಿದೆ. ಸೋಂಕಿನ ಪ್ರಮಾಣ ಶೇ. 0.40 ರಷ್ಟಿದ್ದು, ಮರಣ ಪ್ರಮಾಣ ಶೇ. 0.63 ರಷ್ಟಿದೆ. ಬೆಂಗಳೂರಿನಲ್ಲಿ 152 ಹೊಸ ಪ್ರಕರಣ ಪತ್ತೆಯಾಗಿದ್ದು, 142 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.

 ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಗದಗ್, ಹಾವೇರಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT