ಸಾಂದರ್ಭಿಕ ಚಿತ್ರ 
ರಾಜ್ಯ

ವಿಜಯಪುರ: ಕೆಎಸ್ಆರ್​ಟಿಸಿ ಬಸ್​- ಫಾರ್ಚೂನರ್ ಕಾರು ಮುಖಾಮುಖಿ ಡಿಕ್ಕಿ, ನಾಲ್ವರು ಸ್ಥಳದಲ್ಲೇ ಸಾವು

ವಿಜಯಪುರ ಸಮೀಪದ ಜುಮನಾಳ ಕ್ರಾಸ್ ಬಳಿ ಭಾನುವಾರ ಕೆಎಸ್ಆರ್​​ಟಿಸಿ ಬಸ್ ಹಾಗೂ ಫಾರ್ಚೂನರ್ ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. 

ವಿಜಯಪುರ: ವಿಜಯಪುರ ಸಮೀಪದ ಜುಮನಾಳ ಕ್ರಾಸ್ ಬಳಿ ಭಾನುವಾರ ಕೆಎಸ್ಆರ್​​ಟಿಸಿ ಬಸ್ ಹಾಗೂ ಫಾರ್ಚೂನರ್ ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. 

ಅಪಘಾತದಲ್ಲಿ ಮೃತಪಟ್ಟವರ ಪೈಕಿ ಒಬ್ಬರು ಚಿದಾನಂದ ಸೂರ್ಯವಂಶಿ(40) ಎಂದು ಗುರುತಿಸಲಾಗಿದ್ದು, ಉಳಿದ ಮೂವರ ಗುರುತು ಇನ್ನೂ ಪತ್ತೆಯಾಗಿಲ್ಲ.

ಇಂದು ಸಂಜೆ ವಿಜಯಪುರಕ್ಕೆ ಬರುತ್ತಿದ್ದ ಫಾರ್ಚೂನರ್ ಕಾರಿಗೆ ಎದುರಿನಿಂದ ಬಂದ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಬಸ್ಸಿನಲ್ಲಿದ್ದವರು ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ನರಗುಂದದಿಂದ ವಿಜಯಪುರಕ್ಕೆ ಆಗಮಿಸಿದ್ದರು. ನಿಶ್ಚಿತಾರ್ಥ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ ಹೋಗುತ್ತಿದ್ದಾರೆ ಈ ಅಪಘಾತ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಬಸ್ಸಿನಲ್ಲಿದ್ದ ಹಲವರು ಗಾಯಗೊಂಡಿದ್ದಾರೆ.

ಈ ಸಂಬಂಧ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT