ರಾಜ್ಯ

ನೂತನ‌ ಜಿಲ್ಲೆ ಆಗದಿದ್ರೆ ರಾಜಕೀಯ ನಿವೃತ್ತಿ ಪಡೆಯುತ್ತಿದ್ದೆ: ಆನಂದ್ ಸಿಂಗ್

Manjula VN

ಕೂಡ್ಲಿಗಿ: ಜನತೆಯ ಬೇಡಿಕೆಯಂತೆ ಬಳ್ಳಾರಿಯನ್ನು ವಿಭಜಿಸಿ ನೂತನ ವಿಜಯನಗರ ಜಿಲ್ಲೆ ರಚನೆ ಆಗದಿದ್ದರೆ ರಾಜಕೀಯ ನಿವೃತ್ತಿ ಪಡೆಯುವ ತೀರ್ಮಾನ ಮಾಡಿದ್ದೆ ಎಂದು ಪ್ರವಾಸೋದ್ಯಮ ಸಚಿವರೂ ಆದ ಪರಿಸರ ಖಾತೆ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.

ಕೂಡ್ಲಿಗಿ ತಾಲೂಕಿನಲ್ಲಿ ಶನಿವಾರ ಸಂಜೆ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಒಂದು ಜಿಲ್ಲೆ ರಚನೆ ಮಾಡುವುದು ಸುಲಭದ ಕೆಲಸವಲ್ಲ. ಆದರೆ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನಸ್ಸು ಮಾಡಿದ ಪರಿಣಾಮ‌ ನೂತನ ಜಿಲ್ಲೆ ರಚನೆ ಆಯಿತು ಎಂದು ತಿಳಿಸಿದರು.

ಬಳಿಕ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ದೇಶದಲ್ಲಿ ಕಾಂಗ್ರೆಸ್‌ 70 ವರ್ಷ ಆಳ್ವಿಕೆ ಮಾಡಿದೆ. ಅವರು ದೇಶದ ಅಭಿವೃದ್ಧಿ ಚಿಂತನೆ ಮಾಡುವ ಬದಲು ತನ್ನ ಕುಟುಂಬದ ಚಿಂತೆ ಮಾಡಿದ್ದೇ ಹೆಚ್ಚು. ದೇಶದ ಗಡಿಯನ್ನು ಸೈನಿಕರು ಕಾಯುವ ಹಾಗೆ ಮೋದಿ ಇಡೀ ದೇಶದ ಜನರ ಅಭಿವೃದ್ಧಿ ಕನಸು ನನಸು ಮಾಡುವ ಕಾಯಕದಲ್ಲಿದ್ದಾರೆಂದು ಹೇಳಿದರು.

ಬಳ್ಳಾರಿ, ವಿಜಯನಗರ ಜಿಲ್ಲೆಯಲ್ಲಿ ಕಾಂಗ್ರೆಸ್‌ ತನ್ನ ಅಸ್ತಿತ್ವವನ್ನೇ ಕಳೆದುಕೊಂಡಿದೆ. ಅಲ್ಪಸಂಖ್ಯಾತರು, ಹಿಂದುಳಿದ ವರ್ಗದ ಜನ ಬಿಜೆಪಿ ಸೇರಬಾರದೆಂದು ಸಾಮಾಜಿಕ ಜಾಲತಾಣದಲ್ಲಿ ಹೆದರಿಸುವ ಕೆಲಸವನ್ನು ಕಾಂಗ್ರೆಸ್‌ ಮಾಡುತ್ತಿದೆ ಎಂದು ದೂರಿದರು.

SCROLL FOR NEXT