ರಾಜ್ಯ

ರಾಜ್ಯದಲ್ಲಿ ಇಂದು ಕೊರೋನಾದಿಂದ ಎಂಟು ಸಾವು, ಬೆಂಗಳೂರಿನಲ್ಲಿ 185 ಸೇರಿ 291 ಮಂದಿಗೆ ಪಾಸಿಟಿವ್

Lingaraj Badiger

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 291 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,96,148ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಎಂಟು ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 38211ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 185 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,56,452ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ ಕೊರೋನಾದಿಂದ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 745 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,51,492ಕ್ಕೆ ಏರಿಕೆಯಾಗಿದೆ. ಇನ್ನು 6416 ಸಕ್ರಿಯ ಪ್ರಕರಣಗಳಿವೆ.

SCROLL FOR NEXT