ರೈತಪರ ನಾಯಕರು. 
ರಾಜ್ಯ

ಕೃಷಿ ಮಸೂದೆ ರದ್ದು ನಮಗೆ ಸಿಕ್ಕ ದೊಡ್ಡ ಗೆಲುವು ಆದರೂ ನಮ್ಮ ಪ್ರತಿಭಟನೆ ನಿಲ್ಲಲ್ಲ: ರಾಜ್ಯ ರೈತರು

ಕೃಷಿ ಕಾನೂನುಗಳನ್ನು ರದ್ದುಪಡಿಸುವ ಕೇಂದ್ರ ಸರ್ಕಾರದ ಕ್ರಮವು ರೈತರ ಆಂದೋಲನಕ್ಕೆ ಸಂದ ಜಯ ಎಂದು ಕರ್ನಾಟಕದ ರೈತ ಮುಖಂಡರು ಬಣ್ಣಿಸಿದ್ದು, ಈ ಹಿಂದೆ ನಿರ್ಧರಿಸಿದಂತೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತರಿ ಪಡಿಸುವ ಕಾನೂನು ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸುವವರೆಗೆ ನಮ್ಮ ಪ್ರತಿಭಟನೆ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು: ಕೃಷಿ ಕಾನೂನುಗಳನ್ನು ರದ್ದುಪಡಿಸುವ ಕೇಂದ್ರ ಸರ್ಕಾರದ ಕ್ರಮವು ರೈತರ ಆಂದೋಲನಕ್ಕೆ ಸಂದ ಜಯ ಎಂದು ಕರ್ನಾಟಕದ ರೈತ ಮುಖಂಡರು ಬಣ್ಣಿಸಿದ್ದು, ಈ ಹಿಂದೆ ನಿರ್ಧರಿಸಿದಂತೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತರಿ ಪಡಿಸುವ ಕಾನೂನು ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸುವವರೆಗೆ ನಮ್ಮ ಪ್ರತಿಭಟನೆ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.

ದೊಡ್ಡ ಅಪಾಯವೊಂದು ತಪ್ಪಿಸಲಾಗಿದೆ. ಇದೀಗ ಎಂಎಸ್‌ಪಿ ಖಾತರಿಗೆ ಕಾನೂನಿನ ಸ್ಪಷ್ಟ ಭರವಸೆ, ವಿದ್ಯುತ್ ಬಿಲ್ ಹಿಂಪಡೆಯುವುದು ಮತ್ತು ಆಂದೋಲನದಲ್ಲಿ ಭಾಗವಹಿಸಿದ ರೈತರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವುದು ಸೇರಿದಂತೆ ನಮ್ಮ ಇತರೆ ಹಲವು ಬೇಡಿಕೆಗಳನ್ನು ಸರ್ಕಾರ ಇನ್ನೂ ಪರಿಗಣಿಸಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರು ಹೇಳಿದ್ದಾರೆ.

ಪ್ರತಿಭಟನೆಯಲ್ಲಿ ಹುತಾತ್ಮರ ಸ್ಮಾರಕ ನಿರ್ಮಿಸಲು ಸಿಂಘು ಗಡಿಯಲ್ಲಿ ಭೂಮಿ ನೀಡುವಂತೆ ಒತ್ತಾಯಿಸುತ್ತಿದ್ದೇವೆ. ನಮ್ಮ ಎಲ್ಲ ಬೇಡಿಕೆಗಳು ಈಡೇರುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

ಲಖಿಂಪುರ್ ಖೇರಿ ಘಟನೆಯಲ್ಲಿ ಕೇಂದ್ರ ಸಚಿವರ ಪುತ್ರ ಶಾಮೀಲಾಗಿದ್ದಾರೆಂದು ಆರೋಪಿಸಲಾಗಿದ್ದು, ಘಟನೆ ಹಿನ್ನೆಲೆಯಲ್ಲಿ ಸಚಿವರನ್ನು ಕೇಂದ್ರ ಸಂಪುಟದಿಂದ ಕೈಬಿಡುವಂತೆಯೂ ಒತ್ತಾಯಿಸಿದ್ದಾರೆ.

ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ, ಕೃಷಿ ಕಾನೂನು ಜಾರಿಗೆ ತರುವ ಮುನ್ನ ರೈತರ ಸಲಹೆ ಪಡೆಯುವಲ್ಲಿ ಕೇಂದ್ರ ವಿಫಲವಾಗಿರುವುದರಿಂದ ಕಠಿಣ ಪರಿಸ್ಥಿತಿ ನಿರ್ಮಾಣವಾಗಿತ್ತು. "ಪ್ರತಿಭಟನೆಯಲ್ಲಿ 700 ರೈತರು ಮೃತಪಟ್ಟ ಬಳಿಕ ಕಾನೂನುಗಳನ್ನು ಕೇಂದ್ರ ಹಿಂಪಡೆದುಕೊಂಡಿತು. ಈಗಲಾದರೂ ಸರ್ಕಾರರಕ್ಕೆ ತನ್ನ ತಪ್ಪಿನ ಅರಿವಾಗಿದೆ ಎಂದರು. ಅಲ್ಲದೆ, ಪ್ರತಿಭಟನೆ ವೇಳೆ ಮೃತಪಟ್ಟ ರೈತರಿಗೆ ಪರಿಹಾರ ನೀಡುವಂತೆಯೂ ಕೇಂದ್ರವನ್ನು ಒತ್ತಾಯಿಸಿದರು.

ಈ ನಡುವೆ ರದ್ದಾದ ಕೇಂದ್ರ ಕಾನೂನನ್ನು ಅನುಷ್ಠಾನಕ್ಕೆ ತರಲು ಅನುಕೂಲವಾಗುವಂತೆ ಎಪಿಎಂಸಿ ಕಾಯ್ದೆಗೆ ಮಾಡಿರುವ ತಿದ್ದುಪಡಿಗಳನ್ನು ಹಿಂಪಡೆಯಬೇಕು ಎಂದು ಕರ್ನಾಟಕದ ರೈತರು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ.

ತಿದ್ದುಪಡಿಗಳನ್ನು ಹಿಂಪಡೆಯಲು ಕೇಂದ್ರದಿಂದ ಸ್ಪಷ್ಟ ನಿರ್ದೇಶನಕ್ಕಾಗಿ ರಾಜ್ಯ ಸರ್ಕಾರ ಕಾಯುತ್ತಿದೆ ಎಂದು ಹೇಳಲಾಗುತ್ತಿದ್ದು, ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆಸಿ ಮಾಧುಸ್ವಾಮಿ ಅವರು, ರಾಜ್ಯ ಸರ್ಕಾರ ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT