ಆತ್ಮಹತ್ಯೆ ಮಾಡಿಕೊಂಡ ಶಂಕರ್ ಕುಟುಂಬಸ್ಥರು 
ರಾಜ್ಯ

ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಪ್ರಕರಣ: ತಂದೆ ಶಂಕರ್‌ ಸೇರಿ ಮೂವರ ಬಂಧನ

ನಗರದ ಬ್ಯಾಡರಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಒಂದೇ ಕುಟುಂಬದ ಐವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆ ಮಾಲೀಕ ಹಲ್ಲೇಗೆರೆ ಶಂಕರ್ ಸೇರಿ ಮೂವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಬೆಂಗಳೂರು: ನಗರದ ಬ್ಯಾಡರಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಒಂದೇ ಕುಟುಂಬದ ಐವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆ ಮಾಲೀಕ ಹಲ್ಲೇಗೆರೆ ಶಂಕರ್ ಸೇರಿ ಮೂವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಇತ್ತೀಚೆಗೆ ತಿಗಳರಪಾಳ್ಯದಲ್ಲಿ ಭಾರತಿ(51), ಅವರ ಮಕ್ಕಳಾದ ಸಿಂಚನಾ(34), ಸಿಂಧುರಾಣಿ(33) ಹಾಗೂ ಮಧುಸಾಗರ್(25) ಆತ್ಮಹತ್ಯೆ ಮಾಡಿಕೊಂಡಿದ್ದರು. ಸಿಂಧೂರಾಣಿ ಅವರ ಒಂಬತ್ತು ತಿಂಗಳ ಮಗು ಸಹ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ತಾಯಿಯೇ ಮಗುವಿನ ಕೊಲೆ ನಡೆದಿರುವುದು ಸಾಬೀತಾಗಿತ್ತು.

ಪತ್ನಿ ಹಾಗೂ ಮಕ್ಕಳ ಆತ್ಮಹತ್ಯೆಗೆ ಪ್ರಚೋದನೆ ನೀಡಿದನ್ವಯ ಶಂಕರ್, ಅವರ ಅಳಿಯಂದಿರಾದ ಶ್ರೀಕಾಂತ್ ಹಾಗೂ ಪ್ರದೀಪ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಪ್ರದೀಪ್ ತಂದೆ–ತಾಯಿಯನ್ನು ಆರೋಪಿಯನ್ನಾಗಿ ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಶಂಕರ್ ಹಾಗೂ ಅಳಿಯಂದಿರು, ಮೃತರಿಗೆ ಕಿರುಕುಳ ನೀಡಿರುವುದು ಮೇಲ್ನೋಟಕ್ಕೆ ಬಹಿರಂಗಗೊಂಡಿದೆ. ಅವರ ಕಿರುಕುಳದಿಂದ ಬೇಸತ್ತು ಭಾರತಿ ಹಾಗೂ ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವುದು ತನಿಖೆಯಿಂದ ಸಾಬೀತಾಗಿದೆ ಎಂದು ಹೇಳಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕರ್, ಶ್ರೀಕಾಂತ್ ಹಾಗೂ ಪ್ರದೀಪ್ ಅವರನ್ನು ಸದ್ಯ ಬಂಧಿಸಲಾಗಿದ್ದು, ಮೂವರನ್ನು ನ್ಯಾಯಾಲಯದ ಎದುರು ಹಾಜರುಪಡಿಸಲಾಗುವುದು. ನಂತರ, ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ನ್ಯಾಯಾಧೀಶರಲ್ಲಿ ವಿನಂತಿಸಿಕೊಳ್ಳಲಾಗುವುದು ಎಂದು ತಿಳಿಸಿದರು.

ಇನ್ನಿಬ್ಬರು ಆರೋಪಿಗಳು ನಾಪತ್ತೆಯಾಗಿದ್ದು ಅವರಿಗಾಗಿ ಬಲೆ ಬೀಸಲಾಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಮೊಜ್ತಾಬಾ ಖಮೇನಿ ಜೀವಂತವಾಗಿ ಇದ್ದಾರೋ ಅಥವಾ ಇಲ್ಲವೋ? ಆತಂಕದ ಹಳೆಯ Video ಬಿಡುಗಡೆ ಮಾಡಿದ ಇರಾನ್!