ದೆಹಲಿಯಲ್ಲಿ ಜಮೀರ್ ಅಹ್ಮದ್ ಖಾನ್: ದಾಖಲೆಗಳೊಂದಿಗೆ ಇಡಿ ಕಚೇರಿಗೆ ಹಾಜರು
ಜಾರಿ ನಿರ್ದೇಶನಾಲಯದ ಸೂಚನೆಯ ಮೆರೆಗೆ ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅವರು ಇಂದು ದೆಹಲಿಯಲ್ಲಿರುವ ಇ.ಡಿ. ಕಚೇರಿಗೆ ಹಾಜರಾಗಿದ್ದಾರೆ.
ದೆಹಲಿ: ಜಾರಿ ನಿರ್ದೇಶನಾಲಯದ ಸೂಚನೆಯ ಮೆರೆಗೆ ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅವರು ಇಂದು ದೆಹಲಿಯಲ್ಲಿರುವ ಇ.ಡಿ. ಕಚೇರಿಗೆ ಹಾಜರಾಗಿದ್ದಾರೆ.
ಕಳೆದ ತಿಂಗಳು ಬೆಂಗಳೂರಿನಲ್ಲಿ ತಮ್ಮ ಮನೆಗಳು ಮತ್ತು ಕಚೇರಿಗಳ ಮೇಲೆ ನಡೆದಿದ್ದ ಇಡಿ ದಾಳಿಯ ಸಂಬಂಧ ದಾಖಲೆ ಸಲ್ಲಿಸಲು ಶಾಸಕ ಜಮೀರ್ ಅಹ್ಮದ್ ಖಾನ್ ಭೇಟಿ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಇ.ಡಿ. ಅಧಿಕಾರಿಗಳು ದೂರವಾಣಿ ಕರೆ ಮಾಡಿ ಬರುವುದಕ್ಕೆ ಹೇಳಿದ್ದರು, ಬಂದಿದ್ದೇನೆ. ಈ ಹಿಂದೆ ಹೇಳಿಕೆ ದಾಖಲಿಸಿದ್ದೆ, ಅಗತ್ಯ ದಾಖಲೆ ನೀಡಿದ್ದೆ. ಕೆಲ ವಿಚಾರಗಳ ಬಗ್ಗೆ ಸ್ಪಷ್ಟನೆ ನೀಡಲು ವಿಚಾರಣೆಗೆ ಬಂದಿದ್ದೇನೆ ಎಂದು ದೆಹಲಿಯಲ್ಲಿ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಜಮೀರ್ ಆಹ್ಮದ್ ಖಾನ್ ನಿನ್ನೆ ಸಂಜೆ ಬೆಂಗಳೂರಿನಿಂದ ದೆಹಲಿಗೆ ತೆರಳಿದ್ದಾರೆ. ದಾಳಿಯಾದ ನಂತರ ಇ.ಡಿ ಕಚೇರಿಗೆ ಕೆಲವು ದಾಖಲೆಗಳನ್ನ ಜಮೀರ್ ಆಹ್ಮದ್ ಖಾನ್ ನೀಡಿದ್ದರು.
ಈ ವೇಳೆ ಮತ್ತಷ್ಟು ದಾಖಲೆಗಳನ್ನ ನೀಡುವಂತೆ ಇ.ಡಿ ಅಧಿಕಾರಿಗಳು ಸೂಚಿಸಿದ್ದರು. ಈ ಹಿನ್ನೆಲೆ ದಾಖಲೆಗಳನ್ನ ನೀಡಲು ತೆರಳಿರುವ ಶಾಸಕ ಜಮೀರ್ ಇಂದು ದೆಹಲಿಯ ಖಾನ್ ಮಾರ್ಕೆಟ್ ಬಳಿಯಿವ ಇ.ಡಿ. ಕಚೇರಿಗೆ ತೆರಳಿ ದಾಖಲೆಗಳನ್ನ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.