ಸಂಗ್ರಹ ಚಿತ್ರ 
ರಾಜ್ಯ

ಕೋವಿಡ್'ಗೆ ಪತಿ ಬಲಿ: ಮನನೊಂದು ಇಬ್ಬರು ಮಕ್ಕಳ ಜತೆ ತಾಯಿ ನೇಣಿಗೆ ಶರಣು

ಕೋವಿಡ್'ಗೆ ಪತಿ ಬಲಿಯಾದ ಹಿನ್ನೆಲೆಯಲ್ಲಿ ಮನನೊಂದ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳ ಜೊತೆಗೆ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ನಗರದ ಹೊರವಲಯದಲ್ಲಿ ಶುಕ್ರವಾರ ನಡೆದಿದೆ. 

ಬೆಂಗಳೂರು: ಕೋವಿಡ್'ಗೆ ಪತಿ ಬಲಿಯಾದ ಹಿನ್ನೆಲೆಯಲ್ಲಿ ಮನನೊಂದ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳ ಜೊತೆಗೆ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ನಗರದ ಹೊರವಲಯದಲ್ಲಿ ಶುಕ್ರವಾರ ನಡೆದಿದೆ. 

ತೋಟದ ಗುಡ್ಡದಹಳ್ಳಿ ಹತ್ತಿರದ ಪ್ರಕೃತಿ ಲೇಔಟ್'ನ ವಸಂತ (40), ಯಶವಂತ್ (15) ಹಾಗೂ ನಿಶ್ಚಿತಾ (8) ಮೃತ ದುರ್ದೈವಿಗಳಾಗಿದ್ದಾರೆ. 

ಮನೆಯಲ್ಲಿ ತನ್ನ ಇಬ್ಬರು ಮಕ್ಕಳ ಜೊತೆ ವಸಂತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತರ ಮನೆಗೆ ಸಂಬಂಧಿಕರು ರಾತ್ರಿ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಬಿಎಂಟಿಸಿ ಚಾಲಕ ಕಂ ನಿರ್ವಾಹಕರಾಗಿದ್ದ ವಸಂತ ಅವರ ಪತಿಯು ಕಳೆದ ವರ್ಷ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರು. 

ಇದರಿಂದ ವಸಂತ ಅವರು ಖಿನ್ನತೆಗೊಳಗಾಗಿದ್ದರು. ಈ ಯಾತನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿಬರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. 

ಒಂದೇ ಫ್ಯಾನ್'ಗೆ ಮಗಳು ನಿಶ್ಚಿತಾ ಜೊತೆ ವಸಂತ ನೇಣು ಹಾಕಿಕೊಂಡಿದ್ದರೆ, ಯಶವಂತ್ ಪ್ರತ್ಯೇಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!