ಬೆಳಗಾವಿಯಲ್ಲಿ ದಾರುಣ ಘಟನೆ: ಕರೆಂಟ್ ಶಾಕ್ ನಿಂದ ಅಜ್ಜಿಯನ್ನು ರಕ್ಷಿಸಲು ಹೋದ ಮೊಮ್ಮಗನೂ ಸಾವು!
ವಿದ್ಯುತ್ ಶಾಕ್ಗೆ ಒಳಗಾಗಿದ್ದ ಅಜ್ಜಿಯನ್ನು ರಕ್ಷಿಸಲು ಹೋಗಿದ್ದ ಮೊಮ್ಮಗನೂ ವಿದ್ಯೂತ್ ತಗುಲಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಮಡ್ಡಿ ಗಲ್ಲಿಯಲ್ಲಿ ನಡೆದಿದೆ.
ಬೆಳಗಾವಿ: ವಿದ್ಯುತ್ ಶಾಕ್ಗೆ ಒಳಗಾಗಿದ್ದ ಅಜ್ಜಿಯನ್ನು ರಕ್ಷಿಸಲು ಹೋಗಿದ್ದ ಮೊಮ್ಮಗನೂ ವಿದ್ಯೂತ್ ತಗುಲಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಮಡ್ಡಿ ಗಲ್ಲಿಯಲ್ಲಿ ನಡೆದಿದೆ.
ಅಜ್ಜಿ ಶಾಂತವ್ವಾ ಬಸ್ತವಾಡೆ, ಮೊಮ್ಮಗ ಸಿದ್ದಾರ್ಥ ಬಸ್ತವಾಡೆ (24) ಸ್ಥಳದಲ್ಲೇ ಸಾವನ್ನಪ್ಪಿದ ಮೃತ ದುರ್ದೈವಿಗಳು. ಘಟನೆಯಲ್ಲಿ ಸೊಸೆ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶನಿವಾರ ರಾತ್ರಿ ಮಳೆ ಸುರಿದ ಹಿನ್ನಲೆಯಲ್ಲಿ ಹಿತ್ತಲಿನಲ್ಲಿ ಬಟ್ಟೆ ಹಾಕುವ ತಂತಿಗೆ ವಿದ್ಯುತ್ ತಗುಲಿದೆ. ಇದನ್ನು ಗಮನಿಸದೇ ಅಜ್ಜಿ ಬಟ್ಟೆ ಒಣಗಿಸಲು ತಂತಿ ಮೇಲೆ ಬಟ್ಟೆ ಹಾಕಲು ಹೋದಾಗ ಅಜ್ಜಿಗೆ ಮೊದಲು ವಿದ್ಯೂತ್ ಶಾಕ್ ತಗುಲಿದ್ದು, ಅವರನ್ನು ರಕ್ಷಣೆ ಮಾಡಲು ಹೋದ ಮೊಮ್ಮಗ ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.