ಸಾಂದರ್ಭಿಕ ಚಿತ್ರ 
ರಾಜ್ಯ

ಮಳೆಯಿಂದ ಉರುಳಿದ್ದ ಮರಕ್ಕೆ ಡಿಕ್ಕಿ ಹೊಡೆದು ಹೋಟೆಲ್ ಮಾಲೀಕ ಸಾವು!

ಶನಿವಾರ ರಾತ್ರಿ ಬೆಂಗಳೂರಿನಲ್ಲಿ ಸುರಿದ ಮಳೆಯ ಪರಿಣಾಮ ಉರುಳಿದ್ದ ಮರಕ್ಕೆ ಡಿಕ್ಕಿ ಹೊಡೆದು ಹೋಟೆಲ್ ಮಾಲಿಕ ಸಾವನ್ನಪ್ಪಿರುವ ಘಟನೆ ಸೋಮವಾರ ಬೆಳಿಗ್ಗೆ 4.30ಕ್ಕೆ ನಡೆದಿದೆ. 

ಬೆಂಗಳೂರು: ಶನಿವಾರ ರಾತ್ರಿ ಬೆಂಗಳೂರಿನಲ್ಲಿ ಸುರಿದ ಮಳೆಯ ಪರಿಣಾಮ ಉರುಳಿದ್ದ ಮರಕ್ಕೆ ಡಿಕ್ಕಿ ಹೊಡೆದು ಹೋಟೆಲ್ ಮಾಲಿಕ ಸಾವನ್ನಪ್ಪಿರುವ ಘಟನೆ ಸೋಮವಾರ ಬೆಳಿಗ್ಗೆ 4.30ಕ್ಕೆ ನಡೆದಿದೆ. 

ಬಿಎಸ್ ನಾಗರಾಜ್ ಧನ್ಯ ಮೃತ ದುರ್ದೈವಿಯಾಗಿದ್ದು, ತಮ್ಮ ಹೊಟೇಲ್ ವಾದಿರಾಜ್ ಗೆ ತೆರಳುತ್ತಿದ್ದಾಗ ಈ ಘಟನೆ ವರದಿಯಾಗಿದೆ. ಕತ್ತಲಿದ್ದರಿಂದ ಧರೆಗುರುಳಿದ್ದ ಮರ ವಾಹನ ಸವಾರನಿಗೆ ಕಾಣಲಿಲ್ಲ. ಆದ್ದರಿಂದ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಜಯನಗರದ ಅಪೋಲೋ ಆಸ್ಪತ್ರೆಗೆ ಸೇರಿಸುವ ವೇಳೆಗೆ ಆತ ಮೃತಪಟ್ಟಿದ್ದಾರೆ. ಹೊಟೆಲ್ ಅಸೋಸಿಯೇಷನ್ ನ ಮಾಲಿಕರಾದ ಪಿಸಿರಾವ್ ಈ ಅಪಘಾತದ ಘಟನೆಯನ್ನು ದೃಢಪಡಿಸಿದ್ದಾರೆ. 

ಬಿಎಸ್ ನಾಗರಾಜ್ ಧನ್ಯ ಅವರ ತಲೆಗೆ ತೀವ್ರವಾದ ಗಾಯಗಳಾಗಿದ್ದರಿಂದ ಮೃತಪಟ್ಟಿದ್ದಾರೆ. ಬಿಎಸ್ ನಾಗರಾಜ್ ಬೆಂಗಳೂರು ಹೊಟೇಲ್ ಅಸೋಸಿಯೇಷನ್ ಹಾಗೂ ಕರ್ನಾಟಕ ಹೊಟೇಲ್ ಅಸೋಸಿಯೇಷನ್ ನ ಮಾಜಿ ಕಾರ್ಯದರ್ಶಿಯಾಗಿದ್ದರು." ಬಿಬಿಎಂಪಿ ನೀಡಿರುವ ಮಾಹಿತಿಯ ಪ್ರಕಾರ ಕಂಟ್ರೋಲ್ ರೂಮ್ ಮಳೆಯಿಂದಾಗಿ ಮರಗಳು ಧರೆಗುರುಳಿರುವ 7 ಘಟನೆಗಳು ವರದಿಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT