ರಾಜ್ಯ

ಅಕ್ಟೋಬರ್ 9 ರಂದು ರಾಜ್ಯಕ್ಕೆ ಕೇಂದ್ರ ಆರೋಗ್ಯ ಸಚಿವ ಮಾಂಡವೀಯ ಭೇಟಿ

Manjula VN

ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಅವರು ಅಕ್ಟೋಬರ್ 9 ಮತ್ತು 10 ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ. 

ಈ ಕುರಿತು ಮಾಹಿತಿ ನೀಡಿರುವ ಸಚಿವ ಸುಧಾಕರ್ ಅವರು, ಆರೋಗ್ಯ ಇಲಾಖೆಗೆ ಸಂಬಂಧಿಸಿದ ಹಲವು ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದೆ ಇರಿಸಲಾಗಿದ್ದು. ಈ ತಿಂಗಳು 9 ಮತ್ತು 10 ರಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಅವರು ರಾಜ್ಯಕ್ಕೆ ಬಂದು ಅವಲೋಕನ ನಡೆಸಲಿದ್ದಾರೆಂದು ಹೇಳಿದ್ದಾರೆ. 

ರಾಜ್ಯದಲ್ಲಿ ಒಟ್ಟು 2,500ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿವೆ. ಮೊದಲ ಹಂತದಲ್ಲಿ 250 ಪ್ರಾಥಮಿಕ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಲು ಯೋಜನೆ ರೂಪಿಸಲಾಗಿದೆ. ಇದರ ಜೊತೆಗೆ ಇನ್ನು 250 ಹೆಚ್ಚಿಸಲು ಕೇಂದ್ರದ ಸಹಾಯಕ ಕೇಳಲಾಗಿದೆ. ಒಂದು ಕೇಂದ್ರದಲ್ಲಿ ಒಬ್ಬರು ವೈದ್ಯರು ಇದ್ದರೆ, ಮೂರು ವೈದ್ಯರು ನಿಯೋಜನೆ ಮಾಡಲಾಗುತ್ತದೆ ಎಂದು ತಿಳಿಸಿದರು. 

SCROLL FOR NEXT