ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ವರದಕ್ಷಿಣೆ ವಿಚಾರವಾಗಿ ಮಾವನಿಂದ ಅಳಿಯನ ಕಗ್ಗೊಲೆ

ವರದಕ್ಷಿಣೆ ಕಿರುಕುಳ ವಿಚಾರವಾಗಿ ಕಬ್ಬಿಣದ ರಾಡ್ ನಿಂದ ಹೊಡೆದು ಮಾವನೇ ಅಳಿಯನನ್ನು ಕೊಂದಿರುವ ಘಟನೆ ಹೆಣ್ಣೂರಿನಲ್ಲಿ ನಡೆದಿದೆ. ಅಕ್ಟೋಬರ್ 2 ರಂದು ನಡೆದ ಘಟನೆಯಲ್ಲಿ ಮೊಹಮದ್ ಮಹಬೂಬ್ ಎಂಬಾತ ಸಾವನ್ನಪ್ಪಿದ್ದಾನೆ.

ಬೆಂಗಳೂರು: ವರದಕ್ಷಿಣೆ ಕಿರುಕುಳ ವಿಚಾರವಾಗಿ ಕಬ್ಬಿಣದ ರಾಡ್ ನಿಂದ ಹೊಡೆದು ಮಾವನೇ ಅಳಿಯನನ್ನು ಕೊಂದಿರುವ ಘಟನೆ ಹೆಣ್ಣೂರಿನಲ್ಲಿ ನಡೆದಿದೆ. ಅಕ್ಟೋಬರ್ 2 ರಂದು ನಡೆದ ಘಟನೆಯಲ್ಲಿ ಮೊಹಮದ್ ಮಹಬೂಬ್ ಎಂಬಾತ ಸಾವನ್ನಪ್ಪಿದ್ದಾನೆ.

ಪ್ರಕರಣ ಸಂಬಂಧ ಟೈಲರ್ ಕೆಲಸ ಮಾಡಿಕೊಂಡಿದ್ದ ನಜೀರ್‌ ಅಹಮ್ಮದ್‌ ನನ್ನು ಪೊಲೀಸರು ಬಂಧಿಸಿದ್ದಾರೆ. ರಾತ್ರಿ ಸುಮಾರು 7 ಗಂಟೆ ಸಮಯದಲ್ಲಿ ಗ್ಯಾರೇಜ್ ಗೆ ಬಂದ ನಜೀರ್ ಆಹ್ಮದ್, ಮೊಹಮದ್ ಜೊತೆ ಜಗಳ ಆರಂಭಿಸಿದ್ದಾನೆ.  ಈ ವೇಳೆ ಇಬ್ಬರ ನಡುವೆ ವಾಗ್ವಾದ ತೀವ್ರಗೊಂಡು ಕಬ್ಬಿಣದ ರಾಡ್ ನಿಂದ ಆತನ ತಲೆಗೆ ಹೊಡೆದಿದ್ದಾನೆ.

ಕುಸಿದು ಬಿದ್ದ ಮೊಹಮದ್ ನನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಪರೀಕ್ಷಿಸಿದ ವೈದ್ಯರು ಆತ ಸಾವನ್ನಪ್ಪಿರುವುದಾಗಿ ತಿಳಿಸಿದರು, ಆರು ತಿಂಗಳ ಹಿಂದೆ ಮೊಹಮದ್ ನಜೀರ್ ಅಹ್ಮದ್ ಪುತ್ರಿಯನ್ನು ವಿವಾಹವಾಗಿದ್ದ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ,

ವರದಕ್ಷಿಣೆಗಾಗಿ ಪತ್ನಿಯನ್ನು ಮೊಹಮದ್ ಪೀಡಿಸುತ್ತಿದ್ದ ಎಂದು ತಿಳಿದು ಬಂದಿದೆ. ಗಂಡನ ಮನೆಯಿಂದ ಬಂದ ಆಕೆ ಪೋಷಕರ ಜೊತೆ ಗೆದ್ದಲಹಳ್ಳಿಯಲ್ಲಿ ವಾಸಿಸುತ್ತಿದ್ದಳು. ನಾಲ್ಕು ಲಕ್ಷ ರು. ಹಣ ಹೊಂದಿಸಲು ಸಮಯ ಕೋರಿ ಆಕೆಯ ಮನವೊಲಿಸಿ ಸಂಬಂಧಿಕರು ಆಕೆಯನ್ನು ಗಂಡನ ಮನೆಗೆ ಕಳುಹಿಸಿದ್ದರು.ಆದರೆ ಮತ್ತೆ ಆಕೆಗೆ ಕಿರುಕುಳ ನೀಡಲು ಆರಂಭಿಸಿದ್ದ. ಇದೇ ವಿಚಾರವಾಗಿ ಮಾವ ಮತ್ತು ಅಳಿಯನ ನಡುವೆ ಜಗಳ ಏರ್ಪಟ್ಟಿದೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ