ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಕೊರೋನಾ ಇಳಿಕೆ: ಆರು ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ; 523 ಹೊಸ ಪ್ರಕರಣ ಪತ್ತೆ, 575 ಗುಣಮುಖ, 14 ಸಾವು

ರಾಜ್ಯದಲ್ಲಿ ಕೊರೋನಾ ಇಳಿಕೆ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 523 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,78,808ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಇಳಿಕೆ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 523 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,78,808ಕ್ಕೆ ಏರಿಕೆಯಾಗಿದೆ.

523 ಸೋಂಕಿತರು ಗುಣಮುಖರಾಗಿ, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಗುಣಮುಖರಾದವರ ಒಟ್ಟು ಸಂಖ್ಯೆ 29,29,008 ಆಗಿದೆ. ರಾಜ್ಯದಲ್ಲಿ ಸದ್ಯ 11,926 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸೋಂಕಿನಿಂದ ಇಂದು 14 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಒಟ್ಟು ಮೃತರ ಸಂಖ್ಯೆ 37,845ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸೋಂಕಿನ ಪ್ರಮಾಣ ಶೇಕಡಾವಾರು ಪ್ರಮಾಣ ಶೇ. 059 ರಷ್ಟಿದ್ದು, ಮರಣ ಪ್ರಮಾಣ ಶೇ. 2.67 ರಷ್ಟಿದೆ.

ಬೆಂಗಳೂರು ನಗರದಲ್ಲಿ 201 ಹೊಸ ಪ್ರಕರಣ ಪತ್ತೆಯಾಗಿದ್ದು, 238 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ನಾಲ್ವರು ಮೃತಪಟ್ಟಿದ್ದಾರೆ. ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕೊಪ್ಪಳ,ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'ವಿರಾಟ್ ಕೊಹ್ಲಿ ಬೇಗ ಔಟಾದರೆ ನನಗೆ ಊಟವೇ ಸೇರಲ್ಲ': ಸ್ಟಾರ್ ಬ್ಯಾಟರ್ ಬಗ್ಗೆ ನಾನಾ ಪಾಟೇಕರ್ ಹೇಳಿಕೆಯ ಹಳೆಯ ವಿಡಿಯೋ ವೈರಲ್

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

'KSRTCಯಲ್ಲಿ ಡೀಸೆಲ್ ಕೊರತೆ ತಾತ್ಕಾಲಿಕ'; ಹಣದ ಕೊರತೆ ಇದ್ದಿದ್ದರೆ, ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತಿದ್ದವೇ?': ಜಿ ಪರಮೇಶ್ವರ

ಪಂದ್ಯ ಮುಗಿಸಿ ಮನೆಗೆ ಮರಳುವಾಗ ಭೀಕರ ಅಪಘಾತ, 4 ಕ್ರಿಕೆಟಿಗರ ದಾರುಣ ಸಾವು!