ರಾಜ್ಯ

ವಿಜಯನಗರ ಕಲುಷಿತ ನೀರಿಗೆ ಮೂವರು ಬಲಿ: ಗ್ರಾಮಕ್ಕೆ ಭೇಟಿ ನೀಡಿದ ಅಧಿಕಾರಿಗಳಿಂದ ತಾತ್ಕಾಲಿಕ ಆಸ್ಪತ್ರೆ ಸ್ಥಾಪನೆ 

Manjula VN

ಹೊಸಪೇಟೆ: ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಮಕರಬ್ಬಿಯಲ್ಲಿ ಕಲುಷಿತ ನೀರು ಸೇವಿಸಿ ಮೂವರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮಂಗಳವಾರ ಜಿಲ್ಲೆಗೆ ಉನ್ನತ ಅಧಿಕಾರಿಗಳು ಭೇಟಿ ನೀಡಿದ್ದು, ಇದೀಗ ಗ್ರಾಮದಲ್ಲಿ ತಾತ್ಕಾಲಿಕ ಆಸ್ಪತ್ರೆಯನ್ನು ಸ್ಥಾಪಿಸಲಾಗಿದೆ ಎಂದು ತಿಳಿದುಬಂದಿದೆ. 

ಈ ನಡುವೆ ಗ್ರಾಮದಲ್ಲಿ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಸಾವಿಗೆ ನಿಖರ ಕಾರಣಗಳು ತಿಳಿದುಬಂದಿಲ್ಲ. ಆದರೆ, ಕಲುಷಿತ ನೀರು ಕಾರಣ ಎಂಬ ಶಂಕೆಗಳು ವ್ಯಕ್ತವಾಗತೊಡಗಿವೆ. 

ಉಪ ಆಯುಕ್ತರ ನಿರ್ದೇಶನದ ಮೇರೆಗೆ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ ಜನಾರ್ಧನ್ ಎಚ್ ಎಲ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಕೆ ಅರುಣ್ ಗ್ರಾಮಕ್ಕೆ ಭೇಟಿ ನೀಡಿದ್ದು, ಗ್ರಾಮಸ್ಥರಿಗೆ ಅಭಯ ಹೇಳಿದ್ದಾರೆ. 

ಆತಂಕ ಬೇಡ. ಚೆನ್ನಾಗಿ ಕಾಯಿಸಿ, ಆರಿಸಿದ ನೀರನ್ನು ಕುಡಿಯುವಂತೆ ಹಾಗೂ ಸುರಕ್ಷತಾ ಮಾರ್ಗಸೂಚಿಗಳ್ನು ಪಾಲನೆ ಮಾಡುವಂತೆ ಸಲಹೆ ನೀಡಿದ್ದಾರೆ. 

ಕಳೆದ 15 ದಿನಗಳಿಂದ ಸಂಭವಿಸಿದ ಸಾವಿನಿಂದಾಗಿ ಗ್ರಾಮಸ್ಥರು ಆತಂಕದಲ್ಲಿದ್ದಾರೆ. ಮಂಗಳವಾರ, ಗದಗದಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ ಮತ್ತು ಸಾವಿನ ನಿಖರ ಕಾರಣಕ್ಕಾಗಿ ಕಾಯಲಾಗುತ್ತಿದೆ. ಆಸ್ಪತ್ರೆಗೆ ಈ ವರೆಗೂ ದಾಖಲಾದ 150 ಕ್ಕೂ ಹೆಚ್ಚು ಜನರು ಗುಣಮುಖರಾಗಿದ್ದಾರೆ ಎಂದು ಡಾ ಜನಾರ್ಧನ್ ಅವರು ಹೇಳಿದ್ದಾರೆ.

SCROLL FOR NEXT