ರಾಜ್ಯ

ರಾಜ್ಯದಲ್ಲಿ ಇಂದು ಕೊರೋನಾ ಸಾವಿನ ಸಂಖ್ಯೆ ಇಳಿಮುಖ: ಬೆಂಗಳೂರಿನಲ್ಲಿ 166 ಸೇರಿ 442 ಪ್ರಕರಣ ಪತ್ತೆ; 7 ಸಾವು!

Vishwanath S

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಇಂದು ಇಳಿಕೆಯಾಗಿದ್ದು ಕಳೆದ 24 ಗಂಟೆಯಲ್ಲಿ 442 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 2,979,773ಕ್ಕೆ ಏರಿಕೆಯಾಗಿದೆ.

ಮಹಾಮಾರಿಗೆ ಇಂದು 7 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,861ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು 166 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,47,830ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 2 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 635 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,30,264ಕ್ಕೆ ಏರಿಕೆಯಾಗಿದೆ. ಇನ್ನು11,612 ಸಕ್ರೀಯ ಪ್ರಕರಣಗಳಿವೆ. 

ರಾಜ್ಯಾದ್ಯಂತ ಇಂದು 1,22,647 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 442 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.36ಕ್ಕೆ ಇಳಿದಿದೆ.

SCROLL FOR NEXT