ಚೈತ್ರಾ ಕುಂದಾಪುರ 
ರಾಜ್ಯ

ಸುರತ್ಕಲ್‌ನಲ್ಲಿ ಪ್ರಚೋದನಕಾರಿ ಭಾಷಣ: ಬಜರಂಗದಳ ನಾಯಕಿ ಚೈತ್ರಾ ಕುಂದಾಪುರ ವಿರುದ್ಧ ಕೇಸ್ ದಾಖಲು

ಅಕ್ಟೋಬರ್ 4 ರಂದು ಸುರತ್ಕಲ್‌ನಲ್ಲಿ ಸಾರ್ವಜನಿಕ ಸಭೆಯಲ್ಲಿ ಇತರ ಸಮುದಾಯಗಳ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬಜರಂಗದಳದ ನಾಯಕಿ ಚೈತ್ರಾ ಕುಂದಾಪುರ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮಂಗಳೂರು: ಅಕ್ಟೋಬರ್ 4 ರಂದು ಸುರತ್ಕಲ್‌ನಲ್ಲಿ ಸಾರ್ವಜನಿಕ ಸಭೆಯಲ್ಲಿ ಇತರ ಸಮುದಾಯಗಳ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬಜರಂಗದಳದ ನಾಯಕಿ ಚೈತ್ರಾ ಕುಂದಾಪುರ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

'ಅವಹೇಳನಕಾರಿ ಮತ್ತು ನಿಂದನೀಯ' ಭಾಷಣ ಮಾಡಿದ ಚೈತ್ರಾ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಉದ್ಯಮಿ ಅಬ್ದುಲ್ ಖಾದರ್ ಮತ್ತು ಇತರರು ದೂರು ನೀಡಿದ್ದರು.

ದೂರಿನಲ್ಲಿ, ಅವರು 'ಬಜರಂಗದಳವು ಮುಸ್ಲಿಂ ಮಹಿಳೆಯರನ್ನು ಸುಲಭವಾಗಿ ಮತಾಂತರಗೊಳಿಸಬಹುದು ಮತ್ತು ಅವರಪ ಕುಂಕುಮವನ್ನು ಧರಿಸಬಹುದು' ಎಂದು ಹೇಳಿದ್ದಾಗಿ ಆರೋಪಿಸಿದ್ದಾರೆ.

ಭಜರಂಗದಳವು ಸುರತ್ಕಲ್ ನಲ್ಲಿ ಆಯೋಜಿಸಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಚೈತ್ರಾ ಕುಂದಾಪುರ ಅವರು 'ಅಸಭ್ಯ, ಅಸಂಸದೀಯ ಪದಗಳನ್ನು ಬಳಸಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ.

"ಆಕೆಯ ಭಾಷಣದಲ್ಲಿ, ಒಂದು ನಿರ್ದಿಷ್ಟ ಸಮುದಾಯದ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದಾರೆ ಮತ್ತು ಅದು ಕೋಮು ಘರ್ಷಣೆಗೆ ಕಾರಣವಾಗಬಹುದು ಎಂದು ಆರೋಪಿಸಿ 
ಬಂಟ್ವಾಳ ಕಾಂಗ್ರೆಸ್ ಮುಖಂಡ ಬೊಂಡಾಲ ​​ಚಿತ್ತರಂಜನ್ ಶೆಟ್ಟಿ ಸುರತ್ಕಲ್ ಪೊಲೀಸರಿಗೆ ದೂರು ನೀಡಿದ್ದರು.

ಈ ಎಲ್ಲಾ ದೂರಿನ ಆಧಾರದ ಮೇಲೆ ಚೈತ್ರಾ ಕುಂದಾಪುರ ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ(ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 505 (2) (ಕಿಡಿಗೇಡಿತನದ ಹೇಳಿಕೆಗಳು) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT