ದೆಹಲಿಯಲ್ಲಿ ಕೇಂದ್ರ ರಾಸಾಯನಿಕ ಹಾಗೂ ಆರೋಗ್ಯ ಸಚಿವ ಮನಸುಖ್ ಮಾಂಡವಿ ಅವರನ್ನು ಭೇಟಿ ಮಾಡಿದ ಸಿಎಂ ಬೊಮ್ಮಾಯಿ 
ರಾಜ್ಯ

ರಾಜ್ಯಕ್ಕೆ ರಸಗೊಬ್ಬರ ಬೇಡಿಕೆ ಪೂರೈಸುವ ಭರವಸೆ ನೀಡಿದ ಕೇಂದ್ರ

ಈ ಬಾರಿ ರಾಜ್ಯದಲ್ಲಿ ಬಿತ್ತನೆ ಹೆಚ್ಚಾಗಿದ್ದು ರಸಗೊಬ್ಬರಕ್ಕೂ ಬೇಡಿಕೆ ಹೆಚ್ಚಿದೆ. ಹೀಗಾಗಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಹೆಚ್ಚಿನ ರಸಗೊಬ್ಬರ ಪೂರೈಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನವಿ ಮಾಡಿದ್ದಾರೆ.

ನವದೆಹಲಿ/ಬೆಂಗಳೂರು: ಈ ಬಾರಿ ರಾಜ್ಯದಲ್ಲಿ ಬಿತ್ತನೆ ಹೆಚ್ಚಾಗಿದ್ದು ರಸಗೊಬ್ಬರಕ್ಕೂ ಬೇಡಿಕೆ ಹೆಚ್ಚಿದೆ. ಹೀಗಾಗಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಹೆಚ್ಚಿನ ರಸಗೊಬ್ಬರ ಪೂರೈಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನವಿ ಮಾಡಿದ್ದಾರೆ.

ದೆಹಲಿಯಲ್ಲಿ ಕೇಂದ್ರ ರಾಸಾಯನಿಕ ಹಾಗೂ ಆರೋಗ್ಯ ಸಚಿವ ಮನಸುಖ್ ಮಾಂಡವಿ ಅವರನ್ನು ಭೇಟಿ ಮಾಡಿದ ಸಿಎಂ ಬೊಮ್ಮಾಯಿ, ಕರ್ನಾಟಕಕ್ಕೆ ರಸಗೊಬ್ಬರ ಡಿಎಪಿ 32 ಸಾವಿರ ಮೆಟ್ರಿಕ್ ಟನ್, ಎಂಓಪಿ 10 ಸಾವಿರ ಮೆಟ್ರಿಕ್ ಟನ್ ಕೇಂದ್ರಕ್ಕೆ ಬೇಡಿಕೆಯಿಟ್ಟಿದ್ದು ಒಂದುವಾರದೊಳಗೆ ಡಿಎಪಿ ಪೂರೈಸುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ ಎಂದರು.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ರಾಜ್ಯದಲ್ಲಿ ಯೂರಿಯಾಗೆ ಯಾವುದೇ ಕೊರತೆಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಒಂದು ತಿಂಗಳಲ್ಲಿ ಕರ್ನಾಟಕದಲ್ಲಿ ವ್ಯಾಕ್ಸಿನೇಷನ್ ಡ್ರೈವ್ 1.5 ಕೋಟಿ ತಲುಪುವ ಗುರಿಹೊಂದಿದ್ದು ಈಗಾಗಲೇ 1.48 ಕೋಟಿ ವ್ಯಾಕ್ಸಿನೇಷನ್ ಆಗಿದೆ. ಕರ್ನಾಟಕದ ವ್ಯಾಕ್ಸಿನೇಷನ್ ಡ್ರೈವ್‌ಗೆ ಕೇಂದ್ರದ ಆರೋಗ್ಯ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿರುವುದಾಗಿ ಸಿಎಂ ಹೇಳಿದರು.

ಸದ್ಯ ರಾಜ್ಯದಲ್ಲಿ 51 ಲಕ್ಷ ಲಸಿಕೆ ಶೇಖರಣೆ ಇದ್ದು, ಇನ್ನೂ ಹೆಚ್ಚಿನ ಲಸಿಕೆ ಅವಶ್ಯಕತೆಯಿದ್ದಲ್ಲಿ ಪೂರೈಸುವುದಾಗಿ ಕೇಂದ್ರ ಸಚಿವರು ಹೇಳಿದ್ದಾರೆ. ಡಿಸೆಂಬರ್ ಅಂತ್ಯದವರೆಗೆ ಮೊದಲ ಡೊಸ್ ಶೇ. 90 ರಷ್ಟು ಜನರಿಗೆ ನೀಡುವ ಗುರಿ ಇದೆ. 2ನೇ ಡೋಸ್ ಅನ್ನು ಶೇ. 70 ರಷ್ಟು ಜನರಿಗೆ ನೀಡೋ ಗುರಿ ಇದೆ ಎಂದರು.

ಅಕ್ಟೋಬರ್ 10ರಂದು ಬೆಂಗಳೂರಿನ ನಿಮ್ಹಾನ್ಸ್ ಕಾನ್ವೋಕೇಷನ್‌ಗೆ ಕೇಂದ್ರ ಆರೋಗ್ಯ ಸಚಿವರು ಭೇಟಿ ನೀಡಲಿದ್ದು, ಆ ವೇಳೆ ಅವರೊಂದಿಗೆ ಇನ್ನಷ್ಟು ಚರ್ಚಿಸುವುದಾಗಿ ಸಿಎಂ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!