ರಾಜ್ಯ

ಪೆರಿಷಬಲ್ ಉತ್ಪನ್ನಗಳ ರಫ್ತಿನಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ದೇಶದಲ್ಲೇ ಮೊದಲ ಸ್ಥಾನ!

Lingaraj Badiger

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯಯ ವಿಮಾನ ನಿಲ್ದಾಣವೂ ಅತಿ ಹೆಚ್ಚು ಪೆರಿಷೆಬಲ್(ಕೊಳೆಯುವ) ಪದಾರ್ಥಗಳ ಸರಕು ಸಾಗಣಿ ಮಾಡಿದ ದೇಶದ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಕೃಷಿ ಮತ್ತು ಸಂಸ್ಕರಿಸಿದ ಉತ್ಪನ್ನಗಳ ರಫ್ತು ಅಭಿವೃದ್ಧಿ ಮಂಡಳಿ(ಎಪಿಇಡಿಎ) ನೀಡಿದ ಮಾಹಿತಿಯ ಪ್ರಕಾರ, 2020-21ರ ಹಣಕಾಸು ವರ್ಷದಲ್ಲಿ 41,130 ಮೆಟ್ರಿಕ್ ಟನ್‌ನಷ್ಟು ಕಡಿಮೆ ಬಾಳಿಕೆ ಅವಧಿಯ ಹಣ್ಣು, ತರಕಾರಿಯಂತಹ ಕೊಳೆಯುವ ಉತ್ಪನ್ನಗಳನ್ನು ರಫ್ತು ಮಾಡಲಾಗಿದ್ದು, ಇದು ದೇಶದ ಪೆರಿಷಬಲ್ ಉತ್ಪನ್ನಗಳ ಪೈಕಿ ಶೇ.31 ರಷ್ಟು. 

ಕೋಳಿ, ಹೂಗಳ ರಫ್ತಿನಲ್ಲೂ ಕೆಂಪೇಗೌಡ ವಿಮಾನ ನಿಲ್ದಾಣವೇ ಮುಂಚೂಣಿಯಲ್ಲಿದ್ದು, 28,182 ಮೆಟ್ರಿಕ್‌ಟನ್‌ನಷ್ಟು ಕೋಳಿ ಹಾಗೂ 1,296 ಮೆ.ಟ ಹೂವುಗಳನ್ನು ರಫ್ತು ಮಾಡಲಾಗಿದೆ.

24 ವಿಮಾನಯಾನ ಸಂಸ್ಥೆಗಳು 46 ದೇಶಗಳಿಗೆ ಪೆರಿಷಬಲ್ ಉತ್ಪನ್ನಗಳನ್ನು ರಫ್ತು ಮಾಡುತ್ತಿವೆ. ಪೆರಿಷಬಲ್ ಉತ್ಪನ್ನಗಳನ್ನು ಅತ್ಯಾಧುನಿಕ ತಂತ್ರಜ್ಞಾನದಿಂದ ಕೆಡದಂತೆ ಸಂಸ್ಕರಿಸಿ ವೇಗವಾಗಿ ರಫ್ತು ಮಾಡಲಾಗುತ್ತಿದೆ. ಇದರಿಂದ ರಫ್ತು ಬೇಡಿಕೆಯೂ ಸಹ ದಿನೇದಿನೆ ಹೆಚ್ಚುತ್ತಲೇ ಇದೆ ಎಂದು ಬಿಐಎಎಲ್ ಸ್ಟಾರ್ಟಜಿ ಆಂಡ್ ಡೆವಲಪ್‌ಮೆಂಟ್ ಮುಖ್ಯಾಧಿಕಾರಿ ಸಾತ್ಯಕಿ ರಘುನಾಥ್ ಅವರು ತಿಳಿಸಿದ್ದಾರೆ.

SCROLL FOR NEXT