ಕೇಂದ್ರ ಸಚಿವರೊಂದಿಗೆ ಸಿಎಂ ಬೊಮ್ಮಾಯಿ 
ರಾಜ್ಯ

ಕೇಂದ್ರ ಸಚಿವ ಜೋಷಿ, ವಿಮಾನಯಾನ ಸಚಿವರನ್ನು ಭೇಟಿ ಮಾಡಿದ ಸಿಎಂ: ರಾಜ್ಯದ ಯೋಜನೆಗಳ ಬಗ್ಗೆ ಚರ್ಚೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಕಲ್ಲಿದ್ದಲು, ಗಣಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ನವದೆಹಲಿಯಲ್ಲಿ ಅ.09 ರಂದು ಭೇಟಿ ಮಾಡಿ ಚರ್ಚಿಸಿದರು.

ಬೆಂಗಳುರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಕಲ್ಲಿದ್ದಲು, ಗಣಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ನವದೆಹಲಿಯಲ್ಲಿ ಅ.09 ರಂದು ಭೇಟಿ ಮಾಡಿ ಚರ್ಚಿಸಿದರು.

ರಾಜ್ಯಕ್ಕೆ ಮಂಜೂರಾಗಿರುವ ಯೋಜನೆಗಳು, ಪ್ರಸ್ತಾವಿತ ಯೋಜನೆಗಳ ಅನುಷ್ಠಾನ ಕುರಿತಂತೆ ಮಾತುಕತೆ ನಡೆದಿದ್ದು ಈ ದಿಶೆಯಲ್ಲಿ ಕೇಂದ್ರದಿಂದ ಮತ್ತಷ್ಟೂ ಸಹಕಾರವನ್ನು ಮುಖ್ಯಮಂತ್ರಿ ಕೋರಿದರು. ಇವರ ಪ್ರಸ್ತಾವನೆಗಳ ಜಾರಿಗೆ ಸೂಕ್ತವಾಗಿ ಸ್ಪಂದಿಸುವುದಾಗಿ ಕೇಂದ್ರ ಕಲ್ಲಿದ್ದಲು, ಗಣಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವರು ಹೇಳಿದರು ಎನ್ನಲಾಗಿದೆ.

ಇದೇ ವೇಳೆ ಸಿಎಂ ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನೂ ಭೇಟಿ ಮಾಡಿ ಚರ್ಚಿಸಿದರು.

ರಾಜ್ಯಕ್ಕೆ ಮಂಜೂರಾಗಿರುವ ಯೋಜನೆಗಳು, ಪ್ರಸ್ತಾವಿತ ಯೋಜನೆಗಳ ಅನುಷ್ಠಾನ ಕುರಿತಂತೆ ಮಾತುಕತೆ ನಡೆದಿದ್ದು ಈ ದಿಶೆಯಲ್ಲಿ ಕೇಂದ್ರದಿಂದ ಮತ್ತಷ್ಟೂ ಸಹಕಾರವನ್ನು ಮುಖ್ಯಮಂತ್ರಿ ಕೋರಿದರು. ಇವರ ಪ್ರಸ್ತಾವನೆಗಳ ಜಾರಿಗೆ ಸೂಕ್ತವಾಗಿ ಸ್ಪಂದಿಸುವುದಾಗಿ ಕೇಂದ್ರ ವಿಮಾನಯಾನ ಖಾತೆ ಸಚಿವರು ಹೇಳಿದರು ಎನ್ನಲಾಗಿದೆ.

ಈ ಸಂದರ್ಭದಲ್ಲಿ ಕೇಂದ್ರ ಕಲ್ಲಿದ್ದಲು,ಗಣಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ವಿ.ಸುನೀಲ್‌ ಕುಮಾರ, ಸರಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿ ಅವರ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಹಾಜರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ

ದೇವನಹಳ್ಳಿ ತಹಸೀಲ್ದಾರ್ ಕಚೇರಿಗೆ ದಿಢೀರ್ ಭೇಟಿ; ಕಂದಾಯ ಅಧಿಕಾರಿಯನ್ನು ಅಮಾನತುಗೊಳಿಸಿದ DCM ಜಿ ಪರಮೇಶ್ವರ