ಕೋವಿಡ್-19 ಸೋಂಕು ಪತ್ತೆ ಪರೀಕ್ಷೆ (ಸಂಗ್ರಹ ಚಿತ್ರ) 
ರಾಜ್ಯ

ರಾಜ್ಯದಲ್ಲಿ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 187 ಸೇರಿ ರಾಜ್ಯದಲ್ಲಿ 451 ಪ್ರಕರಣ ಪತ್ತೆ; 9 ಸಾವು 

ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿಕೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 451 ಹೊಸ ಕೊರೋನಾ ಸೋಂಕು ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,80,621ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿಕೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 451 ಹೊಸ ಕೊರೋನಾ ಸೋಂಕು ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,80,621ಕ್ಕೆ ಏರಿಕೆಯಾಗಿದೆ.

ಮಹಾಮಾರಿಗೆ ಇಂದು 9  ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,875ಕ್ಕೆ ಏರಿಕೆಯಾಗಿರುವುದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಯ ಮೂಲಕ ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಇಂದು 187 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,48,157ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 3 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 1,455 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,32,322ಕ್ಕೆ ಏರಿಕೆಯಾಗಿದೆ. ಇನ್ನು ಸಕ್ರೀಯ ಪ್ರಕರಣಗಳ ಸಂಖ್ಯೆ 10,395ಕ್ಕೆ ಇಳಿಕೆಯಾಗಿದೆ.

ರಾಜ್ಯಾದ್ಯಂತ ಇಂದು 1,20,045 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.37ಕ್ಕೆ ಇಳಿದಿದೆ. ರಾಜ್ಯದಲ್ಲಿ ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಶೂನ್ಯ ಕೋವಿಡ್-19 ಪ್ರಕರಣಗಳು ವರದಿಯಾಗಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ