ಗ್ಯಾಂಗ್ ರೇಪ್ 
ರಾಜ್ಯ

ಗ್ಯಾಂಗ್ ರೇಪ್ ನ ನಾಲ್ವರು ಆರೋಪಿಗಳು ಪೊಲೀಸ್ ವಶಕ್ಕೆ

ಅಪ್ರಾಪ್ತ ಬಾಲಕಿಯ ಗ್ಯಾಂಗ್ ರೇಪ್ ಪ್ರಕರಣದಲ್ಲಿ ದಕ್ಷಿಣ ಕನ್ನಡ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. 

ಮಂಗಳೂರು: ಅಪ್ರಾಪ್ತ ಬಾಲಕಿಯ ಗ್ಯಾಂಗ್ ರೇಪ್ ಪ್ರಕರಣದಲ್ಲಿ ದಕ್ಷಿಣ ಕನ್ನಡ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. 

ಬಂಟ್ವಾಳದ ಅಂತಾಡಿಯಲ್ಲಿ ಘಟನೆ ವರದಿಯಾಗಿದ್ದು ಆರೋಪಿಗಳು ಅಪ್ರಾಪ್ತೆಯನ್ನು ಆಟೋ ರಿಕ್ಷಾ ನಿಲ್ದಾಣದಿಂದ ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. 

ದಕ್ಷಿಣ ಕನ್ನಡ ಜಿಲ್ಲೆಯ ಎಸ್ ಪಿ ಹೃಷೀಕೇಶ್ ಸೋನಾವಾನೆ ಈ ಬಗ್ಗೆ ಮಾಹಿತಿ ನೀಡಿದ್ದು ಸಂತ್ರಸ್ತೆ ನೀಡಿರುವ ದೂರಿನ ಪ್ರಕಾರ, ಆಕೆ ಶುಕ್ರವಾರದಂದು ಬೆಳಿಗ್ಗೆ ಶಾಲೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಆಕೆಗೆ ಪರಿಚಯವಿದ್ದ ಶರತ್ ಶೆಟ್ಟಿ ಹಾಗೂ ಇನ್ನೂ ನಾಲ್ವರು  ಕಾರಿನಲ್ಲಿ ಬಂದು ಆಕೆಯನ್ನು ಅಪಹರಿಸಿದ್ದಾರೆ. ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ. ಬಳಿಕ ಆಕೆಯನ್ನು ಬ್ರಹ್ಮರಕೂಟ್ಲು ಬಳಿ ತೆರಳಿದ್ದಾರೆ. ಆಕೆಯನ್ನು ಬಿಟ್ಟು ತೆರಳಿರುವುದು ಸಿಸಿಟಿವಿ ದೃಶ್ಯದಲ್ಲಿ ದಾಖಲಾಗಿದೆ. 

ವಶದಲ್ಲಿರುವ ನಾಲ್ವರ ಪೈಕಿ ಇಬ್ಬರ ವಿರುದ್ಧ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದೆ. ಆರೋಪಿಗಳ ವಿರುದ್ಧ ಸೆಕ್ಷನ್ 366 (ಎ) (ಅಪಹರಣ) 376 (ಡಿ) (ಅತ್ಯಾಚಾರ) ಪೋಸ್ಕೋ ಕಾಯ್ದೆಯ ಸೆಕ್ಷನ್ 506 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತೆಯನ್ನು ಮಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತಮ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ

Ramayana: ಕೊನೆಗೂ 'ರಾಮಾಯಣ' ರಿಲೀಸ್ ಡೇಟ್ ಫಿಕ್ಸ್; ದೀಪಾವಳಿಗೂ ಮೊದಲೇ ಬಿಡುಗಡೆ

ಯಮನಿಗೇ ಚಳ್ಳೇಹಣ್ಣು: ಗುದ್ದಿದ ಲಾರಿಯನ್ನೇ ಹಿಡಿದು ಪ್ರಾಣ ಉಳಿಸಿಕೊಂಡ ಯುವತಿ!-ರೋಚಕ Video