ಸಾಂದರ್ಭಿಕ ಚಿತ್ರ 
ರಾಜ್ಯ

ಕಲಬುರಗಿಯಲ್ಲಿ ಮತ್ತೆ ಎರಡು ಬಾರಿ ಲಘು ಭೂಕಂಪನ; 24 ಗಂಟೆಗಳಲ್ಲಿ ಇದು ಮೂರನೇಯದು

ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ಮತ್ತೆ ಲಘು ಭೂಕಂಪದ ಅನುಭವವಾಗಿದೆ. ಶನಿವಾರ ತಾಲ್ಲೂಕಿನ ಹಲಚೇರಾ ಹಾಗೂ ಗಡಿಕೇಶ್ವರ ಗ್ರಾಮದಲ್ಲಿ ನಸುಕಿನ ಜಾವ 5.40 ರ ಸಮಯದಲ್ಲಿ ಎರಡು ಬಾರಿ ಲಘು ಭೂಕಂಪನದ ಅನುಭವವಾಗಿದೆ.

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ಮತ್ತೆ ಲಘು ಭೂಕಂಪದ ಅನುಭವವಾಗಿದೆ. ಶನಿವಾರ ತಾಲ್ಲೂಕಿನ ಹಲಚೇರಾ ಹಾಗೂ ಗಡಿಕೇಶ್ವರ ಗ್ರಾಮದಲ್ಲಿ ನಸುಕಿನ ಜಾವ 5.40 ರ ಸಮಯದಲ್ಲಿ ಎರಡು ಬಾರಿ ಲಘು ಭೂಕಂಪನದ ಅನುಭವವಾಗಿದೆ.

ಕಂಪನಕ್ಕೆ ಮನೆಯಲ್ಲಿದ್ದ ಪಾತ್ರೆಗಳು ಕೆಳಗೆ ಬಿದ್ದವು. ಇದರಿಂದ ಎಚ್ಚರಗೊಂಡ ಜನ ಆತಂಕದಿಂದ ಮನೆಯಿಂದ ಹೊರಗೆ ಓಡಿ ಬಂದರು ಮತ್ತು ಮನೆಯಿಂದ ಹೊರಬಂದ ಗ್ರಾಮಸ್ಥರು ಮಳೆಯಲ್ಲಿಯೇ ಕಾಲ ಕಳೆದಿದ್ದಾರೆ.

ಶುಕ್ರವಾರವು ಜಿಲ್ಲೆಯಲ್ಲಿ 2.6 ತೀವ್ರತೆ ಕಂಪನವಾಗಿದ್ದು, ಕಾಳಗಿ‌ ತಾಲೂಕಿನ ಹಲಚೇರಾ ಗ್ರಾಮ ಕಂಪನದ ಕೇಂದ್ರ ಬಿಂದುವಾಗಿತ್ತು. ಇಂದು ಕೂಡಾ ಲಘು ಭೂ ಕಂಪನವಾಗಿದೆ. ಕೆಲವೇ ಹೊತ್ತಲ್ಲಿ ಭೂಕಂಪನದ ತೀವ್ರತೆ ಬಗ್ಗೆ ಮಾಹಿತಿ ದೊರಕಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ಆಗಾಗ ಲಘು ಭೂಕಂಪನ ಸಂಭವಿಸುತ್ತಿದೆ. ಕಾಳಗಿ ತಾಲೂಕಿನ ಹ‌ಲಚೇರಾ, ತೇಗಲತಿಪ್ಪಿ, ಹೊಸಳ್ಳಿ ಗ್ರಾಮದಲ್ಲಿ ಕೂಡಾ ಲಘು ಭೂಕಂಪನ ಅನುಭವವಾಗಿದೆ ಎಂದರು.

ಕಳೆದ 24 ಗಂಟೆಗಳಲ್ಲಿ ಭೂಮಿ ಮೂರು ಬಾರಿ ಕಂಪಿಸಿದ್ದು, ಜನ ಭಯಭೀತರಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'Health camp' ಚಿಕಿತ್ಸೆಯಿಂದ ಕಾಲು ಕಳೆದುಕೊಂಡ ಮಹಿಳೆ! ಪೊಲೀಸರಿಗೆ ದೂರು, ಅಭಿಷೇಕ್ ಬ್ಯಾನರ್ಜಿ ವಿರುದ್ಧ ಕೇಸ್ ದಾಖಲು

ನನ್ನ ಜೊತೆ ಮರ್ಯಾದೆಯಿಂದ ಮಾತಾಡು: ಸ್ವಿಟ್ಜರ್ಲೆಂಡ್ ವಿರುದ್ಧದ ಪಂದ್ಯದ ನಡುವೆ ರೆಫರಿ ವಿರುದ್ಧ ಮೆಸ್ಸಿ ವಾಗ್ವಾದ, Video

ಅಸ್ಸಾಂ: ರೋಡ್ ರೋಲರ್ ಬಳಸಿ ಸೀಜ್ ಮಾಡಿದ್ದ 472 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶಪಡಿಸಿದ ಸಿಎಂ ಹಿಮಂತ ಬಿಸ್ವಾ ಶರ್ಮಾ! Video

Iranಗೆ ಅಮೆರಿಕಾ ಬಿಗ್ ಶಾಕ್: 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ; Gulf ರಾಷ್ಟ್ರಗಳತ್ತ ಕ್ಷಿಪಣಿ ಹಾರಿಸಿ Tehran ತಿರುಗೇಟು..!

KSRTC ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿಗೆ ಧರ್ಮದೇಟು, ವಿಡಿಯೋ ವೈರಲ್