ರಾಜ್ಯ

ಲಿಖಿತ್​​ ಕೊಲೆ ಪ್ರಕರಣ ಬೇಧಿಸಿದ ಎಚ್ಎಎಲ್ ಪೊಲೀಸರು: 8 ಗಂಟೆಯೊಳಗೆ ಮೂವರ ಬಂಧನ

Shilpa D

ಬೆಂಗಳೂರು: ಕೊಲೆ ನಡೆದ 8 ಗಂಟೆಯೊಳಗೆ ಪೊಲೀಸರು ಕಾರ್ಯಾಚರಣೆ ನಡೆಸಿ, ಹತ್ಯೆ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹೆಚ್‌ಎಎಲ್‌ ಬಳಿಯ ನಿವಾಸಿ ಲಿಖಿತ್ (21) ಕೊಲೆಯಾದ ಯುವಕ. ಶುಕ್ರವಾರ ಲಾಲ್ ಬಹದ್ದೂರ್ ಶಾಸ್ತ್ರಿ ನಗರದಲ್ಲಿ ಲಿಖಿತ್ ನನ್ನು ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿದ್ದು, ಲಿಖಿತ್ ಸ್ಥಳದಲ್ಲೇ ಮೃತಪಟ್ಟಿದ್ದನು.

ಘಟನೆಗೆ ಸಂಬಂಧಿಸಿದಂತೆ ಹೆಚ್​ಎಎಲ್ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ನಯೀಮ್​​, ಮೋಹಿನ್, ವಸೀಮ್ ಎಂಬುವವರನ್ನು ಹೆಚ್​​​ ಎಎಲ್​ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊಲೆಯಾದ ಲಿಖಿತ್​​ ಮತ್ತು ಆರೋಪಿಗಳು ಎಲ್ಲರೂ ಒಂದೇ ಏರಿಯಾದವರು. ಯುವಕರ ಗುಂಪುಗಳ ನಡುವೆ ಹಣ ಮತ್ತು ಯುವತಿಯ ವಿಚಾರವಾಗಿ ಗಲಾಟೆ ನೆಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಲಿಖಿತ್ ಈ ಮೊದಲು ಸಿದ್ದಿಕ್ ಎಂಬಾತನ ಬಳಿ ಸಾಲ ಪಡೆದಿದ್ದ. ಹಣ ವಾಪಸ್ಸು ಕೇಳಿದಾಗ ಕೊಡದೆ ಅವಾಚ್ಯ ಪದಗಳಿಂದ ನಿಂದಿಸಿದ್ದ. ನಯೀಮ್​​ ಮತ್ತು ಲಿಖಿತ್ ಒಂದೇ ಕಾಲೇಜಿನಲ್ಲಿ ಓದುತ್ತಿದ್ದರು. ಯುವತಿ ವಿಚಾರಕ್ಕೆ ಇಬ್ಬರ ನಡುವೆ ವೈಮನಸ್ಸು ಉಂಟಾಗಿತ್ತು. ಇದೇ ವಿಷಯ ಲಿಖಿತ್​ ಕೊಲೆ​​ಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

SCROLL FOR NEXT