ಸಂಗ್ರಹ ಚಿತ್ರ 
ರಾಜ್ಯ

ನಗರದಲ್ಲಿ ಮುಂದಿನ 48 ಗಂಟೆ ಕಾಲ ಭಾರೀ ಮಳೆ: ‘ಯೆಲ್ಲೊ ಅಲರ್ಟ್‌’ ಮುಂದುವರಿಕೆ

ಅಂಡಮಾನ್ ಬಳಿ ವಾಯುಭಾರ ಕುಸಿತ ಸಂಭವ ಇದ್ದು, ನಗರದಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಬೆಂಗಳೂರು: ಅಂಡಮಾನ್ ಬಳಿ ವಾಯುಭಾರ ಕುಸಿತ ಸಂಭವ ಇದ್ದು, ನಗರದಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಉತ್ತರ ಅಂಡಮಾನ್ ಸಮುದ್ರದ ಮೇಲೆ ಸಮುದ್ರದ ಮಟ್ಟದಿಂದ 5.8 ಕಿ.ಮೀ ಎತ್ತರದಲ್ಲಿ ಮೇಲ್ಮೈ ಸುಳಿಗಾಳಿಯೊಂದು ಸೃಷ್ಟಿಯಾಗಿದ್ದು, ಸೋಮವಾರ ಇದು ವಾಯುಭಾರ ಕುಸಿತವಾಗಿ ಪರಿವರ್ತನೆಯಾಗುವ ಸಾಧ್ಯತೆಗಳಿವೆ. ಬಳಿಕ ಉತ್ತರ ಆಂಧ್ರ ಮತ್ತು ದಕ್ಷಿಣ ಒಡಿಶಾ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಗಳಿವೆ. ಅದೇ ರೀತಿ ಪೂರ್ವ ಮಧ್ಯ ಅರಬ್ಬೀ ಸಮುದ್ರದಲ್ಲಿ ಸಮುದ್ರ ಮಟ್ಟದಿಂದ ಸುಮಾರು 5.8 ಕಿಮೀವರೆಗೂ ಮೇಲ್ಮೈ ಸುಳಿಗಾಳಿ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ. 

ಇನ್ನು ಬೆಂಗಳೂರಿನಲ್ಲಿ ಕಳೆದ 3 ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಭಾನುವಾರ ಮಧ್ಯಾಹ್ನ ಮತ್ತು ಸಂಜೆ ನಗರದಲ್ಲಿ 13 ಎಂಎಂ ಮಳೆಯಾಗಿದೆ. ಹೆಚ್ಎಎಲ್ ನಲ್ಲಿ 11.2 ಎಂಎಂ ಮಳೆಯಾಗಿದೆ. ಭಾರೀ ಮಳೆಯಿಂದಾಗಿ ಕೆಲವೆಡೆ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ, ಮರಗಳು ನೆಲಕ್ಕುರುಳಿ ಅವಾಂತರ ಸೃಷ್ಟಿಯಾಗಿತ್ತು. ನಗರದಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದ್ದು, 64.5 ಎಂಎಂ-115.5 ಎಂಎಂನಷ್ಟು ಮಳೆಯಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದೆ. 

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇರುವುದರಿಂದ ಎರಡೂ ದಿನ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!