ನೇಮಕಾತಿ ಆದೇಶ ಪ್ರತಿ ವಿತರಿಸಿದ ಸಚಿವ ಸುನೀಲ್ ಕುಮಾರ್ 
ರಾಜ್ಯ

ಕೆಪಿಟಿಸಿಎಲ್ ನ 1899 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭ: ಸಚಿವ ಸುನೀಲ್ ಕುಮಾರ್

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ 1899 ಕಿರಿಯ ಪವರ್ ಮ್ಯಾನ್ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ತಿಳಿಸಿದ್ದಾರೆ.

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ 1899 ಕಿರಿಯ ಪವರ್ ಮ್ಯಾನ್ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನ ಕಾವೇರಿ ಭವನದಲ್ಲಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ದ  ಸಭಾಂಗಣದಲ್ಲಿ ಈ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ನೀಡಿ ಮಾತನಾಡಿದ ಅವರು, ಮೊದಲ ಹಂತವಾಗಿ ಇಂದು  ಸಾಂಕೇತಿಕವಾಗಿ 21 ಜನರಿಗೆ ನೇಮಕಾತಿ ಆದೇಶ ಪತ್ರವನ್ನು ವಿತರಿಸಲಾಗಿದೆ ಎಂದರು. 

ಕೆಪಿಟಿಸಿಎಲ್ ನ 1899 ಹುದ್ದೆಗಳಿಗೆ 2019ರ ಫೆಬ್ರವರಿಯಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು, ಅಂದಿನಿಂದ  ಇಂದಿನವರೆಗೂ ಈ ನೇಮಕಾತಿ ಪ್ರಕ್ರಿಯೆ ನಾನಾ ಕಾರಣಗಳಿಗಾಗಿ ನೆನೆಗುದಿಗೆ ಬಿದ್ದಿತ್ತು, ಈ ಬಗ್ಗೆ ಅನೇಕರು ನನ್ನ ಗಮನ ಸೆಳೆದರು. ಕೂಡಲೇ ಅಗತ್ಯವಾದ ಎಲ್ಲ ಪ್ರಕ್ರಿಯೆಗಳನ್ನು ಮುಗಿಸಿ, ಆದೇಶ ಪತ್ರ ನೀಡುವಂತೆ ಸೂಚನೆ ನೀಡಿದ್ದೆ, ಅದರಂತೆ ಇಂದು 21 ಜನ ಕಿರಿಯ ಪವರ್ ಮ್ಯಾನ್ ಗಳಿಗೆ ನೇಮಕಾತಿ ಆದೇಶ ನೀಡಲಾಗಿದೆ ಎಂದು ಹೇಳಿದರು. 

ಶೀಘ್ರದಲ್ಲೇ ಉಳಿದ  1878 ಜನರಿಗೆ ನೇಮಕಾತಿ ಆದೇಶ ನೀಡಲಾಗುವುದು. ಬಿಜೆಪಿ  ಸರ್ಕಾರ ಬಂದ ನಂತರ ಅತಿ ದೊಡ್ಡ ಪ್ರಮಾಣದಲ್ಲಿ ಈ ನೇಮಕ ಪ್ರಕ್ರಿಯೆ ನಡೆದಿರುವುದು ವೈಯಕ್ತಿಕವಾಗಿ ನನಗೆ ಸಂತೋಷ ತಂದಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel