ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ವರುಣನ ಅವಾಂತರ: ವಿದ್ಯುತ್​ ತಗುಲಿ ವ್ಯಕ್ತಿ ಸಾವು

ನಿನ್ನೆ ಸುರಿದ ಭಾರೀ ಮಳೆಯಿಂದ ಸಂಭವಿಸಿದ ವಿದ್ಯುತ್​ ಅವಘಡದಲ್ಲಿ ವ್ಯಕ್ತಿ ಓರ್ವರು ಮೃತಪಟ್ಟಿರುವ ಘಟನೆ ನಗರದ ಕೆ.ಪಿ‌ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.

ಬೆಂಗಳೂರು: ನಿನ್ನೆ ಸುರಿದ ಭಾರೀ ಮಳೆಯಿಂದ ಸಂಭವಿಸಿದ ವಿದ್ಯುತ್​ ಅವಘಡದಲ್ಲಿ ವ್ಯಕ್ತಿ ಓರ್ವರು ಮೃತಪಟ್ಟಿರುವ ಘಟನೆ ನಗರದ ಕೆ.ಪಿ‌ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.

ಮೃತರನ್ನು ವೆಂಕಟೇಶ್ (56) ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದೆ. ಮೃತ ವೆಂಕಟೇಶ್ ಪೇಟಿಂಗ್ ಆಗಿ ಕೆಲಸ ಮಾಡುತ್ತಿದ್ದು, ಅವರ ಪತ್ನಿ ಟೈಲರಿಂಗ್​ ಕೆಲಸ ಮಾಡುತ್ತಿದ್ದರು.

ಸೋಮವಾರ ರಾತ್ರಿ ದಂಪತಿ ಕೆಲಸ ಮುಗಿಸಿ ವಾಪಸ್ಸಾದಾಗ ಧಾರಾಕಾರ ಮಳೆಯಿಂದ ಮನೆಯಲ್ಲಿ ನೀರು ತುಂಬಿಕೊಂಡಿತ್ತು. ಈ ವೇಳೆ ವಿದ್ಯುತ್ ಇಲ್ಲದೇ ದಂಪತಿ ಕತ್ತಲೆಯಲ್ಲೇ ನೀರು ಹೊರಹಾಕುತ್ತಿದ್ದರು. ರಾತ್ರಿ 10:30ರ ಸುಮಾರಿಗೆ ವಿದ್ಯುತ್ ಬಂದಿದ್ದು, ವೆಂಕಟೇಶ್ ಸ್ವಿಚ್​ ಆನ್​ ಮಾಡಲು ಹೋಗಿದ್ದಾರೆ. ಈ ವೇಳೆ ವಿದ್ಯುತ್​ ಅವಘಡ ಸಂಭವಿಸಿ, ವೆಂಕಟೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಡರಾತ್ರಿ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೆ.ಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆಗೆ ಸಂಪುಟ ಸಮ್ಮತಿ!

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!