ಸಾಂದರ್ಭಿಕ ಚಿತ್ರ 
ರಾಜ್ಯ

ಹೂ ಕುಂಡದಲ್ಲಿಟ್ಟ ಕೀ ಎಗರಿಸಿ ಮನೆಗಳ್ಳತನ: ಖತರ್ನಾಕ್ ಚೋರನ ಬಂಧನ; 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದಲ್ಲಿ ಮನೆಗಳ್ಳತನ ಮಾಡುತ್ತಿದ್ದ ಆರೋಪಿಯೋರ್ವನನ್ನು ವಿಜಯ ನಗರ ಪೊಲೀಸರು ಬಂಧಿಸಿದ್ದು, ಆತನಿಂದ ಅಪಾರ ಪ್ರಮಾಣದ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು: ನಗರದಲ್ಲಿ ಮನೆಗಳ್ಳತನ ಮಾಡುತ್ತಿದ್ದ ಆರೋಪಿಯೋರ್ವನನ್ನು ವಿಜಯ ನಗರ ಪೊಲೀಸರು ಬಂಧಿಸಿದ್ದು, ಆತನಿಂದ ಅಪಾರ ಪ್ರಮಾಣದ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿ ಶ್ರೀನಿವಾಸ್ ನಿಂದ 10 ಲಕ್ಷ ರೂ. ಮೌಲ್ಯದ 260 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರ ಪಶ್ಚಿಮ ವಿಭಾಗದ ಡಿಸಿಪಿ ಡಾ. ಸಂಜೀವ್ ಪಾಟೀಲ್ ತಿಳಿಸಿದ್ದಾರೆ.

ಗೃಹಿಣಿಯೊಬ್ಬರು ಮನೆ ಲಾಕ್ ಮಾಡಿ ಬೀಗವನ್ನು ಹೂವಿನ ಕುಂಡದಲ್ಲಿಟ್ಟು ಯೋಗ ತರಬೇತಿಗೆ ಹೋಗುತ್ತಿದ್ದರು. ಹೀಗಾಗಿ ಮನೆಗಳ್ಳನಕ್ಕೆ ಬಂದ ಆರೋಪಿಗೆ ಸುಲಭವಾಗಿ ಮನೆಯ ಬೀಗ ಸಿಕ್ಕಿದ್ದು, ಸೆ.​ 10ರಂದು ಮನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ನಗದು ಹಾಗೂ ಚಿನ್ನಾಭರಣ ಕದ್ದು ಪರಾರಿಯಾಗಿದ್ದನು. 

ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆ ಮಾಲೀಕೆ ವಿಜಯನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ