ರಾಜ್ಯದಲ್ಲಿ ಕೊರೋನಾ ಇಳಿಕೆ: 332 ಸೋಂಕಿತರು ಪತ್ತೆ; 515 ಚೇತರಿಕೆ, 11 ಸಾವು; 10 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ
ರಾಜ್ಯದಲ್ಲಿ ಕೊರೋನಾ ಇಳಿಕೆ ಮುಂದುವರೆದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 332 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಒಟ್ಟು ಸಂಖ್ಯೆ 29,81,732 ಆಗಿದೆ. 332 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಇಳಿಕೆ ಮುಂದುವರೆದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 332 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಒಟ್ಟು ಸಂಖ್ಯೆ 29,81,732 ಆಗಿದೆ.
332 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಗುಣಮುಖರಾದವರ ಒಟ್ಟು ಸೋಂಕು 29,34,085ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 9,712 ಸಕ್ರಿಯ ಪ್ರಕರಣಗಳಿರುವುದಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಇಂದು ಸೋಂಕಿನಿಂದ 11 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 37,906ಕ್ಕೆ ಏರಿಕೆಯಾಗಿದೆ. ಸೋಂಕಿನ ಶೇಕಡಾವಾರು ಪ್ರಮಾಣ ಶೇ. 0.41 ರಷ್ಟಿದ್ದು, ಮರಣ ಪ್ರಮಾಣ ಶೇ. 3.31 ರಷ್ಟಿದೆ. ಬೆಂಗಳೂರಿನಲ್ಲಿ 145 ಹೊಸ ಪ್ರಕರಣ ಪತ್ತೆಯಾಗಿದ್ದು, 125 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಐವರು ಸೋಂಕಿತರು ಮೃತಪಟ್ಟಿದ್ದಾರೆ.
ಬಾಗಲಕೋಟೆ, ಬೀದರ್, ಚಾಮರಾಜನಗರ, ಚಿಕ್ಕಬಳ್ಳಾಪುರ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.
Related Article
ಉಚಿತ ಕೋವಿಡ್ ಲಸಿಕೆ ನೀಡಿದ್ದೇ ಇಂಧನ ದರ ಏರಿಕೆಗೆ ಕಾರಣ: ಕೇಂದ್ರ ಸಚಿವ ರಾಮೇಶ್ವರ್ ತೆಲಿ
ಭಾರತದಲ್ಲಿ ಕೊರೋನಾ ಇಳಿಕೆ: ದೇಶದಲ್ಲಿ 14,313 ಹೊಸ ಕೇಸ್ ಪತ್ತೆ, 181 ಮಂದಿ ಸಾವು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.