ವಿಧಾನಸೌಧ 
ರಾಜ್ಯ

ದೂರು ಸ್ವೀಕರಿಸಲು ನಿರ್ಲಕ್ಷ್ಯ: ಕಂದಾಯ ಇಲಾಖೆಗೆ ಸರ್ಕಾರದ ಎಚ್ಚರಿಕೆ

ತುರ್ತು ಸಂದರ್ಭಗಳಲ್ಲಿ ಸಾಮಾನ್ಯ ಜನತೆ, ಜನಪ್ರತಿನಿಧಿಗಳು ದೂರವಾಣಿ ಕರೆ ಮಾಡಿದರೆ ಸ್ವೀಕರಿಸದೇ ಇರುವ ಕಂದಾಯ ಇಲಾಖೆ ನೌಕರರನ್ನು ಸರ್ಕಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಬೆಂಗಳೂರು: ತುರ್ತು ಸಂದರ್ಭಗಳಲ್ಲಿ ಸಾಮಾನ್ಯ ಜನತೆ, ಜನಪ್ರತಿನಿಧಿಗಳು ದೂರವಾಣಿ ಕರೆ ಮಾಡಿದರೆ ಸ್ವೀಕರಿಸದೇ ಇರುವ ಕಂದಾಯ ಇಲಾಖೆ ನೌಕರರನ್ನು ಸರ್ಕಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಈ ಕುರಿತಂತೆ ಸರ್ಕಾರದ ಸೂಚನೆ ಅನುಸಾರ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ.  ಕಂದಾಯ ಇಲಾಖೆಯ ರಾಜ್ಯದ ಹಾಗೂ ಸಮಾಜದ ಪ್ರಮುಖವಾದ ದೈನಂದಿನ ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತಿದೆ. ಜನವತಿನಿಧಿಗಳ ಹಾಗೂ ಸಾರ್ವಜನಿಕರ ಜೊತೆ ನಿಕಟ ಸಂಪರ್ಕ ಹಾಗೂ ಸಂಬಂಧ ಹೊಂದಿರುವ ಜನಸ್ನೇಹಿ ಇಲಾಖೆಯಾಗಿದೆ ಎಂದು ಇಲಾಖೆ ಮಹತ್ವ ತಿಳಿಸಿದ್ದಾರೆ.

ಕಂದಾಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಗ್ರಾಮಲೆಕ್ಕಿಗರಿಂದ ರಾಜಸ್ವ ನಿರೀಕ್ಷಕರು, ಉಪ ತಹಶೀಲ್ದಾರ್, ತಹಶೀಲ್ದಾರ್, ಉಪ ವಿಭಾಗಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ನೇರವಾಗಿ ಜನರ ಹಾಗೂ ಜನಪ್ರತಿನಿಧಿಗಳ ಸಂಪರ್ಕದಲ್ಲಿರುತ್ತಾರೆ. ಮುಖ್ಯವಾಗಿ ಜನರ ಅಹವಾಲುಗಳನ್ನು ಇತ್ಯರ್ಥ ಪಡಿಸುವ ಪ್ರಥಮ ಹಂತದಲ್ಲಿನ ಪ್ರಮುಖ ಕಾರ್ಯ ತಹಶೀಲ್ದಾರ್‌ದಾಗಿರುತ್ತದೆ, ಈ ನಿಟ್ಟಿನಲ್ಲಿ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳ ದೂರವಾಣಿ ಕರೆಗಳನ್ನು ತಹಶಿಲ್ದಾರರುಗಳು ಸ್ವೀಕರಿಸದಿರುವ ವಿಷಯ ಸರ್ಕಾರದ ಗಮನ ಬಂದಿರುತ್ತದೆ ಎಂದು ಕಟುವಾಗಿ ಹೇಳಲಾಗಿದೆ.

ಇನ್ನು ಮುಂದೆ ಸಾರ್ವಜನಿಕರಿಂದ ಹಾಗೂ ಜನಪ್ರತಿನಿಧಿಗಳಿಂದ ಕರೆ ಬಂದಲ್ಲಿ ಅಧಿಕೃತವಾಗಿ ಕರೆಗಳನ್ನು ಸ್ವೀಕರಿಸಿ ಸದರಿ ಅಹವಾಲು ಮನವಿಗಳಿಗೆ ಹಚ್ಚು ಗಮನ ನೀಡಬೇಕು. ಕಾನೂನಿನ ವ್ಯಾಪ್ತಿಯಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಕರೆಗಳನ್ನು ಸಕಾಲದಲ್ಲಿ ಸ್ವೀಕರಿಸಲು ಸಾಧ್ಯವಾಗದೇ ಇದ್ದ ಪಕ್ಷದಲ್ಲಿ ಸಾರ್ವಜನಿಕರಿಗೆ ತಲುಪಿಸುವ ಸೇವೆಗಳಲ್ಲಿ ಏರು ಪೇರು ಉಂಟಾಗುವ ಸಾಧ್ಯತೆಗಳಿರುತ್ತದೆ ಎಂದು ಹೇಳಲಾಗಿದೆ.

ತಪ್ಪಿದ ಕಲೆಗಳಿಗೆ ಮರು ಕರೆ ಮಾಡಿ ಸಾರ್ವಜನಿಕರಿಂದ ಹಾಗೂ ಜನಪ್ರತಿನಿಧಿಗಳಿಂದ ಸ್ವೀಕೃತವಾಗುವ ಕರೆಯ ಕೋರಿಕೆ, ಮನವಿಗಳನ್ನು ಕಂದಾಯ ಇಲಾಖೆ ಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು, ತಹಶಿಲ್ದಾರರು, ಉಪ ತಹಶೀಲ್ದಾರರು, ರಾಜಸ ನಿರೀಕ್ಷಕರು ಮತ್ತು ಗ್ರಾಮಲೆಕ್ಕಿಗರು ಸ್ವೀಕರಿಸಲೇಬೇಕು ಎಂದು ಖಡಕ್ ಸೂಚನೆ ನೀಡಲಾಗಿದೆ.

ಮನವಿ, ದೂರುಗಳ ಬಗ್ಗೆ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು.  ಜನಪ್ರತಿನಿಧಿಗಳಿಗೆ ಅಗೌರವ ತೋರಿರುವುದು ಕಂಡುಬಂದಲ್ಲಿ ಸೂಕ್ತ ಕ್ರಮ ಜರುಗಿಸಲಾಗುವುದು. ಈ ಬಗ್ಗೆ ಹಕ್ಕುಚ್ಯುತಿ ಉಂಟಾಗುವ ಸಾಧ್ಯತೆ ಇರುವುದರಿಂದ ಇದಕ್ಕೆ ಅವಕಾಶ ನೀಡದಂತೆ ಸಾರ್ವಜನಿಕರಿಂದ ಹಾಗೂ ಜನಪ್ರತಿನಿಧಿಗಳಿಂದ ಬರುವ ಕರಗಳನ್ನು ಅಧಿಕೃತವಾಗಿ ಸ್ವೀಕರಿಸಿ ಅಪೇಕ್ಷಿತ ಮಾಹಿತಿಯನ್ನು ನೀಡಬೇಕೆಂದು ಸೂಚನೆ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video