ಸಿಎಂ ಬೊಮ್ಮಾಯಿ 
ರಾಜ್ಯ

ನೈತಿಕ ಪೊಲೀಸ್ ಗಿರಿ: ಸಿಎಂ ಬೊಮ್ಮಾಯಿ ಹೇಳಿಕೆಗೆ ತೀವ್ರ ಆಕ್ರೋಶ

ನೈತಿಕ ಪೊಲೀಸ್ ಗಿರಿ ಕುರಿತು ‘ಕ್ರಿಯೆ ನಡೆದಾಗ ಪ್ರತಿಕ್ರಿಯೆ ಬರುವುದು ಸಹಜ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿರುವ ಹೇಳಿಕೆ ಇದೀಗ ತೀವ್ರ ಆಕ್ರೋಶ ಕಾರಣವಾಗಿದೆ.

ಬೆಂಗಳೂರು: ನೈತಿಕ ಪೊಲೀಸ್ ಗಿರಿ ಕುರಿತು ‘ಕ್ರಿಯೆ ನಡೆದಾಗ ಪ್ರತಿಕ್ರಿಯೆ ಬರುವುದು ಸಹಜ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿರುವ ಹೇಳಿಕೆ ಇದೀಗ ತೀವ್ರ ಆಕ್ರೋಶ ಕಾರಣವಾಗಿದೆ. 

ನೈತಿಕ ಪೊಲೀಸ್ ಗಿರಿ ಕುರಿತು ನಿನ್ನೆ ಬೊಮ್ಮಾಯಿಯವರು ಹೇಳಿಕೆ ನೀಡಿದ್ದರು. ಪರಸ್ಪರರ ಭಾವನೆಗಳಿಗೆ ಧಕ್ಕೆ ಉಂಟಾದಾಗ ಸಹಜವಾಗಿಯೇ ಕ್ರಿಯೆ-ಪ್ರತಿಕ್ರಿಯೆಗಳು ಇದ್ದೇ ಇರುತ್ತದೆ. ಸಾಮಾಜಿಕವಾಗಿ ಸಾಮರಸ್ಯವನ್ನು ಕಾಪಾಡುವುದು ಸರ್ಕಾರದ ಕರ್ತವ್ಯ ಎಂದು ಹೇಳಿದ್ದರು. ಈ ಹೇಳಿಕೆಯ ವಿಡಿಯೋವನ್ನು ರಾಜ್ಯ ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಹಲವರು ಮುಖ್ಯಮಂತ್ರಿಗಳ ಹೇಳಿಕೆಗ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ, #BommaiStopMoralPolicing ಎಂಬ ಶೀರ್ಷಿಕೆಯಡಿ ಟ್ವಿಟರ್ ನಲ್ಲಿ ದೊಡ್ಡ ಅಭಿಯಾನವೇ ಆರಂಭವಾಗಿದೆ.

‘ಮತೀಯ ಗೂಂಡಾಗಿರಿ ನಡೆಸುತ್ತಿರುವ ಜನರನ್ನು ಬೆಂಬಲಿಸಿ ಮುಖ್ಯಮಂತ್ರಿಯವರೇ ಹೇಳಿಕೆ ನೀಡಿದ್ದಾರೆ. ಇದು ಅಪಾಯಕಾರಿ ಬೆಳವಣಿಗೆ. ಮುಖ್ಯಮಂತ್ರಿಯವರ ಬೆಂಬಲವಿದೆ ಎಂದು ಇನ್ನೂ ದೊಡ್ಡ ಸಂಖ್ಯೆಯಲ್ಲಿ ಅಂತಹ ಕೃತ್ಯಗಳು ನಡೆಯುವ ಅಪಾಯವಿದೆ’ ಎಂದು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸದಸ್ಯರು ಆತಂಕ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ ವಕ್ತಾರೆ ಲಾವಣ್ಯಾ ಬಲ್ಲಾಳ್‌ ಅವರು ಪ್ರತಿಕ್ರಿಯೆ ನೀಡಿ, ‘ರಾಜ್ಯದ ಮುಖ್ಯಮಂತ್ರಿಯೇ ಮತೀಯ ಗೂಂಡಾಗಿರಿಯನ್ನು ಬೆಂಬಲಿಸಿದ್ದಾರೆ. ಉಳಿದವರಿಂದ ಇನ್ನು ಏನನ್ನು ನಿರೀಕ್ಷಿಸಬಹುದು? ರಾಜ್ಯದ ಜನರೇ ದಯವಿಟ್ಟು ಸುರಕ್ಷಿತವಾಗಿರಿ. ಸರ್ಕಾರ ನಿಮ್ಮನ್ನು ರಕ್ಷಿಸುತ್ತದೆ ಎಂದು ಬಯಸಬೇಡಿ’ ಎಂದು ಹೇಳಿದ್ದಾರೆ.

ಡಿವೈಎಫ್‌ಐ ರಾಜ್ಯ ಘಟಕದ ಅಧ್ಯಕ್ಷ ಮುನೀರ್‌ ಕಾಟಿಪಳ್ಳ ಅವರು ಮಾತನಾಡಿ, ‘ಸಂವಿಧಾನದ ಹೆಸರಿನಲ್ಲಿ ಪ್ರಮಾಣ ಮಾಡಿದ ಮುಖ್ಯಮಂತ್ರಿ ಈ ರೀತಿ ಹೇಳಿಕೆ ನೀಡಿರುವುದು ನಾಚಿಕೆಗೇಡಿನ ಕೆಲಸ. ಈ ಮಾತಿನಿಂದ ಮತೀಯವಾದಿಗಳು ಪ್ರಚೋದಿತರಾಗಿ ಬೀದಿಗಿಳಿಯವುದು ಖಚಿತ. ಈ ಮಾತಿಗಾಗಿ ಬೊಮ್ಮಾಯಿ ಅವರು ರಾಜ್ಯದ ಜನರ ಕ್ಷಮೆ ಯಾಚಿಸಬೇಕು’ ಎಂದು ಆಗ್ರಹಿಸಿದ್ದಾರೆ.

ಯುವ ಕಾಂಗ್ರೆಸ್‌ ಮುಖಂಡ ಮೊಹಮ್ಮದ್ ಹ್ಯಾರೀಸ್‌ ನಲಪಾಡ್‌ ಪ್ರತಿಕ್ರಿಯೆ ನೀಡಿ, ಇಂತಹ ಎಚ್ಚರಿಕೆ ಇಲ್ಲದ ಹೇಳಿಕೆಗಳು ಜನರ ರಕ್ಷಣೆಯ ಕುರಿತು ಆತಂಕ ಹುಟ್ಟಿಸುತ್ತಿವೆ. ಜನರನ್ನು ರಕ್ಷಿಸುವುದು ಸರ್ಕಾರದ ಹೊಣೆ. ಆದರೆ, ಈ ಬೇಜವಾಬ್ದಾರಿ ಸರ್ಕಾರ ಜನರ ನಡುವೆ ಬೆಂಕಿ ಹಚ್ಚಲು ಯತ್ನಿಸುತ್ತಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT